ಬೆಂಗಳೂರು: ಸಾರಿಗೆ ನೌಕರರು ಹಮ್ಮಿಕೊಂಡಿದ್ದ ಮುಷ್ಕರವನ್ನು ಹೈಕೋರ್ಟ್ ಆದೇಶದ ಬೆನ್ನಲ್ಲೇ ಅಧಿಕೃತವಾಗಿ ಹಿಂಪಡೆಯಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಸಾರಿಗೆ ನೌಕರರ ಒಕ್ಕೂಟದ ಸಂಚಾಲಕರಾದ ಜಯದೇವರಾಜೆ ಅರಸ್ ಅವರು ಜಂಟಿ ಹೇಳಿಕೆ ನೀಡಿದ್ದು, “ಹೈಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ನಾವು ಮುಷ್ಕರವನ್ನು ಹಿಂಪಡೆಯುತ್ತಿದ್ದೇವೆ” ಎಂದು ಪ್ರಕಟಿಸಿದ್ದಾರೆ.
ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ನಾಳೆ (ಬುಧವಾರ) ರಾಜ್ಯಾದ್ಯಂತ ಸಾರಿಗೆ ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಎಂದಿನಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸರ್ಕಾರಕ್ಕೆ ಮೊದಲೇ ಮಾಹಿತಿ ನೀಡಿದ್ದೆವು: ಇದೇ ಸಂದರ್ಭದಲ್ಲಿ ಮಾತನಾಡಿದ ಸಂಚಾಲಕರು, “ನಾವು ಹಠಾತ್ತನೆ ಈ ನಿರ್ಧಾರ ಕೈಗೊಂಡಿಲ್ಲ. ನಮ್ಮ ಬೇಡಿಕೆಗಳು ಹಾಗೂ ಮುಷ್ಕರದ ಬಗ್ಗೆ ರಾಜ್ಯ ಸರ್ಕಾರಕ್ಕೆ ಮೊದಲೇ ಸಂಪೂರ್ಣ ಮಾಹಿತಿ ನೀಡಿದ್ದೆವು” ಎಂದು ತಿಳಿಸಿದರು. ನ್ಯಾಯಾಲಯದ ಆದೇಶವನ್ನು ಪಾಲಿಸುತ್ತಿರುವುದರಿಂದ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ, ನಾಳೆ ಎಂದಿನಂತೆ ಬಸ್ ಸಂಚಾರ ಇರಲಿದೆ ಎಂದು ಅವರು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.
ಮೇ.29ರಂದು ರೋಟರಿ ಬೆಂಗಳೂರು ಎಬಿಲಿಟೀಸ್ ಸಂಸ್ಥೆಯಿಂದ ‘ಅಬಿಲಿಟೀಸ್ ಗಾನ ರಸಮಂಜರಿ’








