ಬೆಂಗಳೂರು : ಸಾರಿಗೆ ನೌಕರರ ಹಿಂದಿನ ಮುಷ್ಕರಗಳಲ್ಲಿ ಸಿಬ್ಬಂದಿ ಮೇಲೆ ದಾಖಲಾದ ಪ್ರಕರಣ ಹಿಂಪ ಡೆಯುವುದು, ಸರ್ಕಾರಿ ನೌಕರರ ಸರಿಸಮಾನ ವೇತನ, ಸೌಲಭ್ಯ ಕಲ್ಪಿಸುವಂತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ.4ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ತಿಳಿಸಿದೆ.
BREAKING : ನಟ ‘ಧ್ರುವ ಸರ್ಜಾ’ ಇದ್ದ ವಿಮಾನ ‘ಕ್ರಾಶ್’ : ಪೈಲೇಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಬಿ.ಎಸ್.ಸುರೇಶ್, 2020ರ ಡಿಸೆಂಬರ್ ಮತ್ತು 2021ರ ಏಪ್ರಿಲ್ ಮುಷ್ಕರಕ್ಕೆ ಸಂಬಂಧಿಸಿ ಕಾರ್ಮಿಕರ ವಿರುದ್ಧ ಕೈಗೊಂಡ ಎಲ್ಲಾ ಶಿಸ್ತಿನ ಕ್ರಮ, ದಾಖಲಾದ 60ಕ್ಕೂ ಹೆಚ್ಚು ಪ್ರಕರಣ ವನ್ನು ರದ್ದು ಮಾಡಬೇಕು.
One Nation One Election: ಇಂದು ಬಿಜೆಪಿಯಿಂದ ಕೋವಿಂದ್ ಸಮಿತಿಗೆ ‘ಜ್ಞಾಪಕ ಪತ್ರ’ ಸಲ್ಲಿಕೆ
ಮುಷ್ಕರದಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಕ್ಕೆ ನಿಯೋಜಿಸಬೇಕು ಎಂದು ಒತ್ತಾಯಿಸಿದರು. 2020ರ ಜ.1ರಿಂದ ಅನ್ವಯವಾಗುವಂತೆ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಒಂದೇ ಕಂತಿನಲ್ಲಿ ವೇತನದ ಹಿಂಬಾಕಿ ಪಾವತಿ, 2020ರಿಂದ ನಿವೃತ್ತಿಯಾದ ನೌಕರರಿಗೆ ವೇತನ ವಿಮರ್ಶೆ ಮಾಡಿ ಬಾಕಿ, ಹಿಂಬಾಕಿ ಮೊತ್ತವನ್ನು ಕೂಡಲೇ ಪಾವತಿಸಬೇಕು ಎಂದರು.
ಸುದಾಮನಿಂದ ‘ಅವಲಕ್ಕಿ’ ತೆಗೆದುಕೊಂಡ ಕೃಷ್ಣನನ್ನು ‘ಭ್ರಷ್ಟಾಚಾರಿ’ ಎನ್ನುತ್ತಿತ್ತು : ಸುಪ್ರೀಂ ಕುರಿತು ಮೋದಿ ವ್ಯಂಗ್ಯ
ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಸರಿ ಸಮಾನ ವೇತನ ಮತ್ತು ಸೌಲ ಭ್ಯವನ್ನು ಸಾರಿಗೆ ನೌಕರ ರಿಗೂ ವಿಸ್ತರಿಸಬೇಕು. ಕಾರ್ಮಿಕರ ಸಂಸ್ಥೆಗೆ ಕೂಡಲೇ ಚುನಾವಣೆ ನಡೆಸಿ, ಮಾನ್ಯತೆ ಪ್ರಶ್ನೆ ಇತ್ಯರ್ಥ ಮಾಡ ಬೇಕು. ಜತೆಗೆ ಉಚಿತ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಬೇಕು ಎಂದು ಒತ್ತಾಯಿಸಿದರು.