Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸ್ಲೀಪ್ ಡಿವೋರ್ಸ್’: ಉತ್ತಮ ಆರೋಗ್ಯಕ್ಕಾಗಿ ಪ್ರತ್ಯೇಕವಾಗಿ ಮಲಗಲು ಮುಂದಾಗುತ್ತಿರುವ ದಂಪತಿಗಳು!

21/03/2026 9:53 PM

ಬಹಾಮಾಸ್ ಬಳಿಯ ‘ಶಾರ್ಕ್’ಗಳಲ್ಲಿ ಕೊಕೇನ್ ಮತ್ತು ಕೆಫೀನ್ ಅಂಶ ಕಂಡುಬಂದಿದೆ ; ಅಧ್ಯಯನ

21/03/2026 9:53 PM

ಭಾವನಾತ್ಮಕವಾಗಿ ‘ಅಪಕ್ವ ಪೋಷಕ’ರನ್ನು ನಿಭಾಯಿಸುವುದು ಹೇಗೆ? ಮನಶ್ಶಾಸ್ತ್ರಜ್ಞರು ನೀಡಿದ 3 ಸೂತ್ರಗಳಿವು

21/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » NWKRTCಗೆ ಆಯ್ಕೆಗೊಂಡ ನೂತನ ಚಾಲಕರಿಗೆ ನೇಮಕಾತಿ ಪತ್ರ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
KARNATAKA

NWKRTCಗೆ ಆಯ್ಕೆಗೊಂಡ ನೂತನ ಚಾಲಕರಿಗೆ ನೇಮಕಾತಿ ಪತ್ರ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

By kannadanewsnow0925/06/2025 7:35 PM

ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ನೇಮಕಾತಿಗೊ ಚಾಲಕರಿಗೆ ನೇಮಕಾತಿ ಪತ್ರ ವಿತರಣೆ ಹಾಗೂ ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅನಾವರಣಗೊಳಿಸಿದರು. 

ಇಂದು ಬೆಂಗಳೂರಿನ ಕೆ ಎಸ್ ಆರ್ ಟಿ ಸಿಯ ಸಭಾಂಗಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ನೇಮಕಾತಿ ಮೂಲಕ ಆಯ್ಕೆಗೊಂಡ ಚಾಲಕರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಪತ್ರ ವಿತರಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಅವರು ಸಾಂಕೇತಿಕವಾಗಿ 46 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿದರು. ನಂತರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶ ಅನಾವರಣಗೊಳಿಸಿದರು.

ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳಿಗೆ ಶುಭಾಶಯಗಳನ್ನು ತಿಳಿಸಿದ ಅವರು, 2019 ರಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ದೇಶದಲ್ಲೆಡೆ ಹರಡಿದ ಕೋವಿಡ್-19 ಕಾರಣದಿಂದ ಸ್ಥಗಿತಗೊಂಡಿತ್ತು. ನಂತರ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ವಾ.ಕ.ರ.ಸಾ. ಸಂಸ್ಥೆಯಲ್ಲಿ 1000 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿ, ಬಹಳ ಯಶಸ್ವಿಯಾಗಿ ಹಾಗೂ ಸಂಪೂರ್ಣ ಪಾರದರ್ಶಕತೆಯಿಂದ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದೇವೆ ಎಂದು ತಿಳಿಸಿದರು.

ಸರ್ಕಾರವು 2000 ಚಾಲಕ-ಕಂ-ನಿರ್ವಾಹಕ‌ ಹುದ್ದೆಗಳಿಗೆ 2023 ರಲ್ಲಿ ಅನುಮತಿ ನೀಡಿತ್ತು, ಆದರೆ ಚಾಲಕ‌‌ ಹುದ್ದೆಗೆ ಅಧಿಸೂಚನೆ ಹೊರಡಿಸಿದ್ದರಿಂದ, 1000 ಚಾಲಕರನ್ನು ನೇಮಕಾತಿ ಮಾಡಿಕೊಂಡು, ಹೊಸದಾಗಿ‌ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅಧಿಸೂಚನೆ ಹೊರಡಿಸಲು ಕ್ರಮ ತೆಗೆದುಕೊಳ್ಳುವಾಗ ಈಗಾಗಲೇ 57000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅವರಿಗೆ ಅನ್ಯಾಯವಾಗಬಾರದೆಂಬ ಸದುದ್ದೇಶದಿಂದ ವಯೋಮಿತಿ ಸಡಿಲಿಕೆಗಾಗಿ DPAR ಮತ್ತು ಕಾನೂನು ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂಬುದಾಗಿ ಸಚಿವರು ತಿಳಿಸಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮಾನ್ಯ ಅಧ್ಯಕ್ಷರಾದ ಭರಮಗೌಡ ಕಾಗೆ ಮಾತನಾಡಿ, ಸಂಸ್ಥೆಗೆ ಇನ್ನೂ ಚಾಲನಾ ಸಿಬ್ಬಂದಿಗಳ ಅವಶ್ಯಕತೆ ಇದೆ ಹಾಗಾಗಿ ಮತ್ತೋಮ್ಮೆ ಚಾಲನಾ ಸಿಬ್ಬಂದಿಗಳ ನೇಮಕಾತಿಯನ್ನು ಪ್ರಾರಂಭಿಸಿದರೆ ಪುನಃ ಸಂಸ್ಥೆಗೆ ಖರ್ಚು ವೆಚ್ಚವಾಗುತ್ತದೆ. ಘಟಕಗಳ ಸುಧಾರಣೆ ಮಾಡಬೇಕಾಗಿದೆ ಅದಕ್ಕಾಗಿ ವಿಶೇಷ ಹೆಚ್ಚು ಅನುದಾನವನ್ನು ಸರಕಾರದಿಂದ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಮ್ ಭಾಆಸೇ. ರವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಾನ್ಯ ಉಪಾಧ್ಯಕ್ಷರಾದ ಪೀರಸಾಬ್ ಕೌತಾಳ, ಅಕ್ರಂ ಪಾಷಾ,ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಕ.ರಾ.ರ.ಸಾ,  ಆರ್. ರಾಮಚಂದ್ರನ್, ಭಾಆಸೇ ವ್ಯವಸ್ಥಾಪಕ ನಿರ್ದೇಶಕರು, ಬೆ.ಮ.ನ.ಸಾ, ಪ್ರಿಯಾಂಗಾ ಎಮ್ ಭಾಆಸೇ. ವ್ಯವಸ್ಥಾಪಕ ನಿರ್ದೇಶಕರು, ವಾ.ಕ.ರ.ಸಾ, ಎಮ್. ರಾಚಪ್ಪ, ಕ ಆಸೇ, ವ್ಯವಸ್ಥಾಪಕ ನಿರ್ದೇಶಕರು, ಕ.ಕ.ರ.ಸಾ, ಡಾ.ನಂದಿನಿದೇವಿ ಕೆ ಭಾಆಸೇ, ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ), ಇಬ್ರಾಯಿಮ್ ಮೈಗೂರು ಭಾಆಸೇ, ನಿರ್ದೇಶಕರು (ಮಾಹಿತಿ ಮತ್ತು ತಂತ್ರಜ್ಞಾನ) ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಡ್ರೀಮ್ ಸ್ಟೆಪ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ವಿವೇಕಾನಂದ ವಿಶ್ವಜ್ಞ್ ಸ್ವಾಗತಿಸಿದರು ಹಾಗೂ ಕಾರ್ಯಕ್ರಮವನ್ನು ಸುನೀಲ ಪತ್ರಿ ನಿರೂಪಿಸಿದರು.

ಪ್ರತಿ ಜಿಲ್ಲೆಯಲ್ಲಿ ಸೂಪರ್‌ ಸ್ಪೆಷಾಲಿಟಿ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಪ್ಯಾಕೇಜ್ ಟೂರ್ ಪ್ರಾರಂಭಿಸಿದ KSRTC

Share. Facebook Twitter LinkedIn WhatsApp Email

Related Posts

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

21/03/2026 9:16 PM1 Min Read

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM2 Mins Read

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM2 Mins Read
Recent News

‘ಸ್ಲೀಪ್ ಡಿವೋರ್ಸ್’: ಉತ್ತಮ ಆರೋಗ್ಯಕ್ಕಾಗಿ ಪ್ರತ್ಯೇಕವಾಗಿ ಮಲಗಲು ಮುಂದಾಗುತ್ತಿರುವ ದಂಪತಿಗಳು!

21/03/2026 9:53 PM

ಬಹಾಮಾಸ್ ಬಳಿಯ ‘ಶಾರ್ಕ್’ಗಳಲ್ಲಿ ಕೊಕೇನ್ ಮತ್ತು ಕೆಫೀನ್ ಅಂಶ ಕಂಡುಬಂದಿದೆ ; ಅಧ್ಯಯನ

21/03/2026 9:53 PM

ಭಾವನಾತ್ಮಕವಾಗಿ ‘ಅಪಕ್ವ ಪೋಷಕ’ರನ್ನು ನಿಭಾಯಿಸುವುದು ಹೇಗೆ? ಮನಶ್ಶಾಸ್ತ್ರಜ್ಞರು ನೀಡಿದ 3 ಸೂತ್ರಗಳಿವು

21/03/2026 9:49 PM

ಡೇಟಿಂಗ್ ಲೋಕದ ಹೊಸ ವಿಲನ್ ‘ಘೋಸ್ಟ್‌ಲೈಟಿಂಗ್’: ಇದು ‘ಘೋಸ್ಟಿಂಗ್‌’ಗಿಂತಲೂ ಹೆಚ್ಚು ಅಪಾಯಕಾರಿ ಏಕೆ?

21/03/2026 9:46 PM
State News
KARNATAKA

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

By kannadanewsnow0921/03/2026 9:16 PM KARNATAKA 1 Min Read

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ, ಚಾಮರಾಜನಗರ ಚಾಮರಾಜನಗರ: ಮಂಡ್ಯ ಜಿಲ್ಲೆಯಲ್ಲಿ ಎಸ್ಪಿಯವರ ಫ್ಲೆಕ್ಸ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ, ಚಾಮರಾಜನಗರದಲ್ಲೂ ಅಂತಹದ್ದೇ ಘಟನೆ…

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM

ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?

21/03/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.