ಬೆಂಗಳೂರು: ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಯ ಆದಾಯ ಹೆಚ್ಚಾಗಿದೆ ಅಂತ ಕಾಂಗ್ರೆಸ್ ಸರ್ಕಾರ ಹೇಳುತ್ತಿದ್ದರೇ, ಸಾರಿಗೆ ಇಲಾಖೆಗೆ ಬಾಕಿ ಹಣವನ್ನೇ ಬಿಡುಗಡೆ ಮಾಡಿಲ್ಲ ಅಂತ ಬಿಜೆಪಿ ಆರೋಪಿಸಿದೆ. ಬಿಜೆಪಿಯ ಈ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಏನು ತಿರುಗೇಟು ಕೊಟ್ಟಿದ್ದಾರೆ ಅಂತ ಮುಂದೆ ಓದಿ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾಗಿದೆ. ತಮ್ಮ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ ಗೂ ನಾವು ಏಕೆ ಉತ್ತರಿಸುತ್ತೇವೆ ಎಂಬುದು ಗೊತ್ತಿದೆಯೇ? ನಮಗೆ ನಮ್ಮ ಅಭಿವೃದ್ದಿ ಕಾರ್ಯಗಳ ಅಂಕಿ ಅಂಶಗಳೇ ನಮ್ಮ ಸಾಧನೆಯ ಮಾನದಂಡ ಎಂಬ ಅಚಲವಾದ ನಂಬಿಕೆ ಎಂದಿದ್ದಾರೆ.
ಶಕ್ತಿ ಯೋಜನೆಗೆ ಸಂಬಂಧಪಟ್ಟಂತೆ ಸರ್ಕಾರವು ಕೆಎಸ್ಆರ್ಟಿಸಿಗೆ – ರೂ.2481 ಕೋಟಿ , ಬಿಎಂಟಿಸಿಗೆ – ರೂ. 1126 ಕೋಟಿ ., ವಾಯುವ್ಯ ಸಾರಿಗೆಗೆ – ರೂ 1613 ಕೋಟಿ . ಕಲ್ಯಾಣ ಕರ್ನಾಟಕ ಸಾರಿಗೆಗೆ- ರೂ 1321 ಕೋಟಿ ರೂ. ಅನುದಾನ, ಒಟ್ಟು ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ರೂ 6543 ಕೋಟಿ ಅನುದಾನವನ್ನು ಸರ್ಕಾರ 2023ರ ಜೂನ್ನಿಂದ 2024ರ ನವೆಂಬರ್ವರೆಗೆ ಬಿಡುಗಡೆ ಮಾಡಿದೆ. ಈವರೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ಬಿಡುಗಡೆ ಮಾಡಿರುವ ನಮಗೆ ರೂ 414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ? ಎಂದು ಪ್ರಶ್ನಿಸಿದ್ದಾರೆ.
ತಮ್ಮ ಬಿ.ಜೆ.ಪಿ ಸರ್ಕಾರವು ಬಿಟ್ಟು ಹೋಗಿದ್ದ ರೂ.5900 ಕೋಟಿ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ , ಖರೀದಿ ಸಾಮಾಗ್ರಿಗಳ ಹಣ ಸೇರಿ ಎಲ್ಲಾ ಬಾಕಿ ಗಳನ್ನು ತೀರಿಸುವ ಹೊಣೆಗಾರಿಕೆ ಹೊತ್ತುಕೊಂಡು ನಾವು ಸಂಸ್ಥೆಗಳನ್ನು ಮುನ್ನಡೆಸಬೇಕಾಗಿದೆ ಎಂದು ಹೇಳಿದ್ದಾರೆ.
2023 ಮಾರ್ಚ್ ನಲ್ಲಿ , 38 ತಿಂಗಳುಗಳ ನಂತರ ಸಂಬಳ ಏರಿಕೆ ಮಾಡಿ, ಏರಿಕೆಯಾದ ಸಂಬಳದ 38 ತಿಂಗಳ ಅರಿಯರ್ಸ್ ಸಿಬ್ಬಂದಿಗಳಿಗೆ ನೀಡದೆ, ಅದಕ್ಜೆ ಬೇಕಾದ ಅನುದಾನವನ್ನು ನೀಡದೆ, ನಿವೃತ್ತಿ ಹೊಂದಿದ 11694 ಸಿಬ್ನಂದಿಗಳಿಗೆ ತಮ್ಮ ಕಾಲದ ಉಪಧನ ಮತ್ತು ಗಳಿಕೆ ರಜೆ ಬಾಕಿ ಹಣ ರೂ. 224.05 ಕೋಟಿ ನಾವು ಎರಡು ದಿನದ ಹಿಂದೆ ಪಾವತಿಸಿದ್ದೇವೆ. ತಮ್ಮ ದುರಾಡಳಿತಕ್ಕೆ ಇದಕ್ಕಿಂತ ಬೇರೆ ಕೈಗನ್ನಡಿಯ ಅವಶ್ಯಕತೆ ಇದೆಯೇ? ಎಂದು ಕೇಳಿದ್ದಾರೆ.
ಶೂನ್ಯ ನೇಮಕಾತಿ, ಶೂನ್ಯ ಹೊಸ ಬಸ್ಸುಗಳ ಸೇರ್ಪಡೆ, ಶೂನ್ಯ ಅಭಿವೃದ್ಧಿ ಕಾರ್ಯ, ಶೂನ್ಯ ಸಾಧನೆಗೆ ಹಾಗೂ ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಂದ ತಮ್ಮ ಸರ್ಕಾರಕ್ಕೆ ನಮ್ಮ ಧಿಕ್ಕಾರವಿದೆ ಎಂಬುದಾಗಿ ತಿರುಗೇಟು ನೀಡಿದ್ದಾರೆ.
ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾಗಿದೆ.
ತಮ್ಮ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ ಗೂ ನಾವು ಏಕೆ ಉತ್ತರಿಸುತ್ತೇವೆ ಎಂಬುದು ಗೊತ್ತಿದೆಯೇ? ನಮಗೆ ನಮ್ಮ ಅಭಿವೃದ್ದಿ ಕಾರ್ಯಗಳ ಅಂಕಿ ಅಂಶಗಳೇ ನಮ್ಮ ಸಾಧನೆಯ ಮಾನದಂಡ ಎಂಬ ಅಚಲವಾದ ನಂಬಿಕೆ.
ಶಕ್ತಿ ಯೋಜನೆಗೆ ಸಂಬಂಧಪಟ್ಟಂತೆ ಸರ್ಕಾರವು ಕೆಎಸ್… https://t.co/aKKyF0NoqB
— Ramalinga Reddy (@RLR_BTM) December 23, 2024
ಸಾಗರ ತಾಲ್ಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಸದಸ್ಯರಾಗಿ ‘ಪತ್ರಕರ್ತ ಉಮೇಶ್ ಮೊಗವೀರ’ ಆಯ್ಕೆ
ಅಂಬೇಡ್ಕರ್ ಅವರೇನು ಮಹಾ? ಎಂದ ಅಮಿತ್ ಷಾ ವಜಾಗೊಳಿಸಿ: ಸಚಿವ ಡಾ ಹೆಚ್ ಸಿ ಮಹದೇವಪ್ಪ ಒತ್ತಾಯ
BIG NEWS: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ವಿರುದ್ಧ ಕಾನೂನು ಸಮರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್