Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏನಿದು ‘ಡೋರ್‌ಬೆಲ್ ಫ್ರೆಂಡ್’ ಟ್ರೆಂಡ್? ಆಪ್ತ ಸಂಬಂಧಗಳಿಗೆ ಹೊಸ ಅರ್ಥ ನೀಡುತ್ತಿರುವ ವಿಭಿನ್ನ ಸ್ನೇಹದ ಪರಿಕಲ್ಪನೆ!

ಮೊಬೈಲ್ ಆಪ್‌ಗಳಲ್ಲಿ ಅಶ್ಲೀಲ ಕಂಟೆಂಟ್: ಗೂಗಲ್ ಮತ್ತು ಆಪಲ್ ಸಂಸ್ಥೆಗಳಿಗೆ ದೆಹಲಿ ಹೈಕೋರ್ಟ್ ನೋಟಿಸ್!

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರಿಗೆ ಬಸ್ ಪ್ರಯಾಣಿಕರ ಸುರಕ್ಷತೆಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಕ್ರಮ: NWKRTC ವ್ಯಾಪ್ತಿಯಲ್ಲಿ 1000 ಸಿಸಿಟಿವಿ ಅಳವಡಿಕೆ
KARNATAKA

ಸಾರಿಗೆ ಬಸ್ ಪ್ರಯಾಣಿಕರ ಸುರಕ್ಷತೆಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಕ್ರಮ: NWKRTC ವ್ಯಾಪ್ತಿಯಲ್ಲಿ 1000 ಸಿಸಿಟಿವಿ ಅಳವಡಿಕೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: NWKRTC ವ್ಯಾಪ್ತಿಯ ಘಟಕ/ ವಿಭಾಗ‌ಗಳು, ಕಾರ್ಯಾಗಾರ ಮತ್ತು‌ ಬಸ್ ನಿಲ್ದಾಣಗಳಲ್ಲಿ 1000 ಸಿಸಿಟಿವಿ ಅಳವಡಿಕೆ ಮಾಡಿರುವ ರಾಜ್ಯದ ಮೊದಲ ರಸ್ತೆ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೂಲಕ ಸಾರಿಗೆ ಬಸ್ ಪ್ರಯಾಣಿಕರ ಸುರಕ್ಷತೆಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಕ್ರಮ ಕೈಗೊಂಡಿದ್ದಾರೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಪ್ರಯಾಣಿಕರ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಸುಮಾರು 141 ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದಿದ್ದಾರೆ.

ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ ಹಾಗೂ ಉತ್ತರ ಕನ್ನಡ ಸೇರಿದಂತೆ ಆರು ಜಿಲ್ಲೆಗಳು ಮತ್ತು ಒಂಬತ್ತು ವಿಭಾಗೀಯ ಕೇಂದ್ರಗಳನ್ನು ಒಳಗೊಂಡಿದೆ. ಸಾವಿರಾರು ಪ್ರಯಾಣಿಕರು ಪ್ರತಿದಿನ ಸಾರಿಗೆ ಸೇವೆಯನ್ನು ಬಳಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಸರ್ಕಾರ ಒದಗಿಸಿದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಸಹಜವಾಗಿ ಹೆಚ್ಚಾಗಿದೆ.ಇದಲ್ಲದೆ, ಕೆಲವು ಬಸ್ ನಿಲ್ದಾಣಗಳಲ್ಲಿ ಕಳ್ಳತನ, ಮೊಬೈಲ್ ಕಳವು, ಸರಕು ನಾಪತ್ತೆ ಕುರಿತು ದೂರುಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಪ್ರಕ್ರಿಯೆಗೆ ವೇಗ ನೀಡಲಾಯಿತು ಎಂದು ತಿಳಿಸಿದ್ದಾರೆ.

ಎಲ್ಲಾ ರೀತಿಯ ಅಹಿತಕರ ಚಟುವಟಿಕೆಗಳ ಬಗ್ಗೆ ನಿಗಾವಹಿಸಲು, ಎನ್‍ಡಬ್ಲ್ಯೂಕೆಆರ್‍ಟಿಸಿ ವ್ಯಾಪ್ತಿಯ ಆರು ಜಿಲ್ಲೆಗಳು ಹಾಗೂ ಒಂಬತ್ತು ವಿಭಾಗಗಳಲ್ಲಿ 141 ಸ್ಥಳಗಳಲ್ಲಿ 1,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಎಂದು ಹೇಳಿದ್ದಾರೆ.

ಇದು ತನ್ನ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ಅಳವಡಿಸಿರುವ ಮೊದಲ ನಿಗಮವಾಗಿದೆ. ಸಿಬ್ಬಂದಿ ಮೇಲ್ವಿಚಾರಣೆ ಮತ್ತು ಡಿಪೋದಿಂದ ಬಸ್ಸುಗಳ ಚಲನವಲನವನ್ನು ಗಮನಿಸಲು ಡಿಪೋಗಳಲ್ಲಿಯೂ ಸಹ ಸಿಸಿಟಿವಿಗಳನ್ನು ಅಳವಡಿಸಲಾಗಿದ್ದು, ಪ್ರತಿಯೊಂದು ವಿಭಾಗದ ಭದ್ರತಾ ಅಧಿಕಾರಿಗಳು ಸಿಸಿಟಿವಿ ಮೇಲ್ವಿಚಾರಣೆ ಮಾಡುತ್ತಿದ್ದು, ಸಂಶಯಾಸ್ಪದ ಚಲನೆಗಳು ಅಥವಾ ಇತತೆ ಅಹಿತಕರ ಘಟನೆಗಳನ್ನು ತಕ್ಷಣವೇ ಮೇಲಾಧಿಕಾರಿಗಳ ಗಮನಕ್ಕೆ ತರುತ್ತಾರೆ. ಇದೊಂದು ಅತ್ಯುತ್ತಮ‌ ಪ್ರಯಾಣಿಕ ಸ್ನೇಹಿ‌ ಉಪಕ್ರಮವಾಗಿದೆ ಎಂದಿದ್ದಾರೆ.

ಹಿಂದೆ ಕೆಲವೆಡೆ ಮಾತ್ರ ಸಿಸಿಟಿವಿ ಇದ್ದು, ಅವುಗಳಲ್ಲಿ ಕೆಲವು ಕಾರ್ಯನಿರ್ವಹಿಸುತ್ತಿರಲಿಲ್ಲ. ಇಂತಹ ಹಳೆಯ ಸಿಸಿಟಿವಿಗಳನ್ನು , ಹೊಸ ಸಿಸಿಟಿವಿಗಳಿಂದ ಬದಲಾಯಿಸಲಾಗಿದೆ. ಇದಕ್ಕಾಗಿ ಸುಮಾರು ರೂ.1.5 ಕೋಟಿ ವೆಚ್ಚ ಮಾಡಲಾಗಿದೆ. ಇದು ಕಳ್ಳತನ, ಕಿರುಕುಳ, ಗಲಾಟೆ ಅಥವಾ ಬೇರೆ ಯಾವುದೇ ಪ್ರಕರಣಗಳ ತನಿಖೆಗೆ ಪೊಲೀಸರಿಗೂ ಸಹ ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಬಸ್‌ಗಳ ಒಳಗೆಯೂ ಸಿಸಿಟಿವಿಗಳನ್ನು ಅಳವಡಿಸುವ ಯೋಜನೆಯಿದ್ದು, ಮೊದಲ ಹಂತದಲ್ಲಿ, ದೂರ ಪ್ರಯಾಣದ ಪ್ರೀಮಿಯಂ ಬಸ್‌ಗಳಲ್ಲಿ ಸಿಸಿಟಿವಿ ಅಳವಡಿಸಲಾಗುವುದು. ಬಸ್‌ಗಳು ಊಟಕ್ಕಾಗಿ ನಿಲ್ಲುವ ಡಾಬಾಗಳ ಬಗ್ಗೆ ಸಹ ಪ್ರಯಾಣಿಕರಿಂದ ಕೆಲವು ದೂರುಗಳು ಬಂದಿದ್ದು, ಅದನ್ನೂ ನಿಗಾ ವಹಿಸುವ ವ್ಯವಸ್ಥೆ ಮಾಡಲಾಗುವುದು. ಪ್ರಯಾಣಿಕರ ಸುರಕ್ಷತೆ ಪ್ರಥಮ ಆದ್ಯತೆ ನೀಡಲಾಗಿದೆ ಎಂದಿದ್ದಾರೆ.

ಬೆಳಗಾವಿಯಲ್ಲಿ ವಸತಿ ಶಾಲೆಯಲ್ಲಿ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, ಇಬ್ಬರ ಸ್ಥಿತಿ ಗಂಭೀರ

300 ವರ್ಷಗಳ ನಂತರ ಮಾನವ ದೇಹದಲ್ಲಿ ಕ್ಯಾನ್ಸರ್ ಚಿಕಿತ್ಸೆಯನ್ನು ಬದಲಾಯಿಸಬಲ್ಲ ಹೊಸ ಅಂಗ ಪತ್ತೆ

Share. Facebook Twitter LinkedIn WhatsApp Email

Related Posts

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

2 Mins Read

ರಾಜ್ಯ ಸರ್ಕಾರದಿಂದ 87 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸ್ಥಳ ನಿಯುಕ್ತಿಗೊಳಿಸಿ ಆದೇಶ

6 Mins Read

ಕೋರ್ಟ್ ನಿರ್ದೇಶನದಂತೆ GBA ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

1 Min Read
Recent News

ಏನಿದು ‘ಡೋರ್‌ಬೆಲ್ ಫ್ರೆಂಡ್’ ಟ್ರೆಂಡ್? ಆಪ್ತ ಸಂಬಂಧಗಳಿಗೆ ಹೊಸ ಅರ್ಥ ನೀಡುತ್ತಿರುವ ವಿಭಿನ್ನ ಸ್ನೇಹದ ಪರಿಕಲ್ಪನೆ!

ಮೊಬೈಲ್ ಆಪ್‌ಗಳಲ್ಲಿ ಅಶ್ಲೀಲ ಕಂಟೆಂಟ್: ಗೂಗಲ್ ಮತ್ತು ಆಪಲ್ ಸಂಸ್ಥೆಗಳಿಗೆ ದೆಹಲಿ ಹೈಕೋರ್ಟ್ ನೋಟಿಸ್!

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

​ಬೀಜಿಂಗ್‌ನಲ್ಲಿ ‘ಮಹಾಬಲ’ರ ಸಮಾಗಮ: ಇರಾನ್ ಯುದ್ಧ ಮತ್ತು ವ್ಯಾಪಾರ ಸಂಬಂಧಗಳ ಕುರಿತು ಟ್ರಂಪ್-ಕ್ಸಿ ಜಿನ್‌ಪಿಂಗ್ ಮಾತುಕತೆ!

State News
KARNATAKA

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಏಕರೂಪತೆ, ಸಮಾನತೆ ಮತ್ತು ಜಾತ್ಯತೀತತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ದಿನಾಂಕ…

ರಾಜ್ಯ ಸರ್ಕಾರದಿಂದ 87 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸ್ಥಳ ನಿಯುಕ್ತಿಗೊಳಿಸಿ ಆದೇಶ

ಕೋರ್ಟ್ ನಿರ್ದೇಶನದಂತೆ GBA ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

BREAKING : ವೀರಶೈವ ಲಿಂಗಾಯತ ಸಾಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ | Actor Dilip Raj

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.