ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದಾರೆ. ಬೇಡಿಕೆ ಈಡೇರಿಕೆ ಸಂಬಂಧ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆದಂತ ಸಭೆಯು ವಿಫಲವಾಗಿದೆ.
ಇಂದು ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಲಾರಿ ಮಾಲೀಕರ ಬೇಡಿಕೆ ಈಡೇರಿಸೋ ಸಂಬಂಧ ಸರ್ಕಾರದಿಂದ ಸರಿಯಾದ ನಿರ್ಧಾರ ವ್ಯಕ್ತವಾಗಿಲ್ಲ ಎನ್ನಲಾಗುತ್ತಿದೆ.
ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೆ ಎಸ್ ಆರ್ ಟಿ ಸಿ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆದಂತ ಸಭೆಯು ವಿಫಲವಾಗಿದೆ. ಹೀಗಾಗಿ ಎರಡನೇ ಸುತ್ತಿನ ಸಭೆಯನ್ನು ಸಂಜೆ 5.30ರ ವೇಳೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಸಭೆಯ ಬಳಿಕ ಲಾರಿ ಮಾಲೀಕರ ಮುಷ್ಕರ ಅಂತ್ಯವೋ, ಮುಂದುವರಿಕೆಯೋ ಎನ್ನುವುದು ನಿರ್ಧಾರವಾಗಲಿದೆ.