ಬೆಂಗಳೂರು : ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಪ್ರಯಾಣಿಕರು ಮಾನ್ಯ ಸಚಿವರ ಗಮನಕ್ಕೆ ತಂದಿದ್ದರು. ಈ ಬಗ್ಗೆ ಸಚಿವರು ಕೂಡಲೇ ಕಾಮಗಾರಿ ಕೈಗೆತ್ತಿಕೊಂಡು ಬಸ್ ಗಳ ಸುಗಮ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದರು. ಈ ಸಂಬಂಧ ತೆಗೆದುಕೊಂಡಿರುವ ಕ್ರಮವನ್ನು ಪರಿಶೀಲಿಸಲು ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಾಮರ್ಶೆ ನಡೆಸಿರುತ್ತಾರೆ.
ಮೊದಲನೇ ಹಂತದಲ್ಲಿ ಸದರಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಮುಂದಿನ ಹಂತದಲ್ಲಿ ಇನ್ನೆರಡು ಸ್ಥಳಗಳಲ್ಲಿ ( ಮಳೆಗ ಹಾನಿಗೆ ಸಿಲುಕುವ) ಕಾರ್ಯಕೈಗೊಳ್ಳಲು ಸೂಚನೆ ನೀಡಿರುತ್ತಾರೆ. ಇದೇ ಸಂದರ್ಭದಲ್ಲಿ ಬಸ್ ನಿಲ್ದಾಣದ ಎಲ್ಲಾ ಟರ್ಮಿನಲ್ ಗಳ ಪರಿವೀಕ್ಷಣೆ ನಡೆಸಿದರು. ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ವಾಣಿಜ್ಯ ಮಳಿಗೆಗಳು ಖಾಲಿ ಉಳಿಯದಂತೆ ಕ್ರಮವಹಿಸಲು ತಿಳಿಸಿದರು.
ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಚಾಲನಾ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪದ ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚಿಸಿದರು. ಅಲ್ಲದೇ, ಬೆಂ.ಮ.ಸಾ.ಸಂಸ್ಥೆಯ ಬಸ್ ನಿಲ್ದಾಣಕ್ಕೂಭೇಟಿ ನೀಡಿ, ಕಟ್ಟಡದ ಮೇಲೆ ಬೆಳೆದಿರುವ ಗಿಡಗಳನ್ನು ತೆಗಿಸಿ, ಸ್ವಚ್ಛಗೊಳಿಸಲು ಸೂಚಿಸಿದರು.
ಕರಾರಸಾ ನಿಗಮದ ಮಾನ್ಯ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತಿ), ನಿರ್ದೇಶಕರು (ಮಾಹಿತಿ ತಂತ್ರಜ್ಞಾನ) ರವರು ಹಾಜರಿದ್ದು ಚಾಲನಾ ಸಿಬ್ಬಂದಿಗಳ ವಿಶ್ರಾಂತಿ ಗೃಹ ಹಾಗೂ ಇನ್ನಿತರೆ ವ್ಯವಸ್ಥೆಗಳ ಕುರಿತು ಪರಿವೀಕ್ಷಣೆ ನಡೆಸಿದರು. ಕೇಂದ್ರ ಕಚೇರಿಯ ಇಲಾಖಾ ಮುಖ್ಯಸ್ಥರು ಕೆಂಪೇಗೌಡ ಬಸ್ ನಿಲ್ದಾಣ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.








