ಬೆಂಗಳೂರು, ಫೆ.19: ಸಾರಿಗೆ ನೌಕರರ ಬೇಡಿಕೆಗಿಂತ ಕಡಿಮೆ ಹಿಂಬಾಕಿ ನೀಡಿರುವ ಬಗ್ಗೆ ಸದ್ಯ ಅಷ್ಟು ಕೊಟ್ಟಿರುವುದಕ್ಕೆ ಸಂತೋಷ ಪಡಬೇಕು. ಸರ್ಕಾರದ ಪರಿಸ್ಥಿತಿಯನ್ನು ಅವರು ಅರ್ಥ ಮಾಡಿಕೊಳ್ಳಬೇಕು. ದಯವಿಟ್ಟು ಸಾರಿಗೆ ನೌಕರರು ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಪ್ರಿಯಾಂಕಾ ಗಾಂಧಿ ಅವರ ಜೊತೆ ಅಸ್ಸಾಂ ಭೇಟಿ
ಪ್ರಿಯಾಂಕಾ ಗಾಂಧಿ ಅವರು, ನಾನು, ಭೂಪೇಶ್ ಬಘೇಲ ಅವರು ಹಾಗೂ ತಂಡ ಅಸ್ಸಾಂಗೆ ತೆರಳುತ್ತಿದ್ದೇವೆ. ಹಲವು ವಿಚಾರಗಳ ಕುರಿತು ಸರಣಿ ಸಭೆಗಳನ್ನು ನಡೆಸುತ್ತೇವೆ. ಅಸ್ಸಾಂ ಚುನಾವಣೆ ವಿಚಾರವಾಗಿ ದೆಹಲಿಯಲ್ಲಿ 3-4 ಸಭೆಗಳನ್ನು ನಡೆಸಿದ್ದೇವೆ. ಬೇಕಾದ ಮಾಹಿತಿಗಳನ್ನು ಪಡೆದುಕೊಂಡಿದ್ದೇವೆ. ತಂತ್ರಗಾರಿಕೆ ಸೇರಿದಂತೆ ಇನ್ನಿತರೇ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಬಾರಿ ಅಸ್ಸಾಂನಲ್ಲಿ ಬದಲಾವಣೆ ಆಗುತ್ತದೆ ಎನ್ನುವ ಭರವಸೆಯಿದೆ. ಕಾಮಾಕ್ಯ ದೇವಿ ದೇವಾಲಯಕ್ಕೂ ಭೇಟಿ ನೀಡುತ್ತೇನೆ. ಎರಡು ದಿನಗಳ ಪ್ರವಾಸ ಇದಾಗಿದೆ” ಎಂದು ಹೇಳಿದರು.








