ಬೆಂಗಳೂರಲ್ಲಿ ಮಳೆಗಾಲದಲ್ಲಿ ಸಕ್ರೀಯವಾಗಿ ಕಾರ್ಯ ನಿರ್ವಹಿಸಲು ಮರ ಕಟಾವು ತಂಡ ರಚನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದ ವೇಳೆ ಧರೆಗುರುಳುವ ಮರ, ಮರದ ರೆಂಬೆ/ಕೊಂಬೆಗಳನ್ನು ತೆರವುಗೊಳಿಸುವ ಸಲುವಾಗಿ “ಮರ ಕಟಾವು ತಂಡಗಳು” ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಧರಗುರುಳಿದ ಮರಗಳನ್ನು ಕಾಲಮಿತಿಯೊಳಗಾಗಿ ತೆರವುಗೊಳಿಸಲಾಗುತ್ತಿದೆ ಎಂಬುದಾಗಿ ಬಿಬಿಎಂಪಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಗರಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮಳೆಯಾಗುವ ವೇಳೆ ಮರಗಳು, ಮರದ ರೆಂಬೆ/ಕೊಂಬೆಗಳು ಧರೆಗುರುಳಲಿವೆ. ಇದರಿಂದ ನಾಗರೀಕರಿಗೆ ಹಾಗೂ ವಾಹನ ಸವಾರರಿಗೆ ಸಾಕಷ್ಟು ಸಮಸ್ಯೆಯಾಗಲಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಅರಣ್ಯ ವಿಭಾಗವು ಮರ ಕಟಾವು ತಂಡಗಳನ್ನು ನಿಯೋಜಿಸಿದೆ ಎಂದಿದೆ. ಪಾಲಿಕೆಯ ನಿಯಂತ್ರಣ … Continue reading ಬೆಂಗಳೂರಲ್ಲಿ ಮಳೆಗಾಲದಲ್ಲಿ ಸಕ್ರೀಯವಾಗಿ ಕಾರ್ಯ ನಿರ್ವಹಿಸಲು ಮರ ಕಟಾವು ತಂಡ ರಚನೆ