ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಇದೀಗ ಅಗಲಿದ ಶ್ರೀಗಳಿಗೆ ರಾಜ್ಯ ಸರ್ಕಾರದಿಂದ ಗೌರವ ನಮನ ಸಲ್ಲಿಕೆಯಾಗಿದೆ.
ವಿಜಯಪುರದಲ್ಲಿ ಸೈನಿಕ ಶಾಲೆ ಆವರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಗಲಿದ ಶ್ರೀಗಳಿಗೆ ಸರ್ಕಾರಿ ಗೌರವ ನಮನ ಸಲ್ಲಿಸಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅಂತಿನ ನಮನ ಸಲ್ಲಿಸಿದರು. ಪೊಲೀಸ್ ಬ್ಯಾಂಡ್ ನಿಂದ ರಾಷ್ಟ್ರಗೀತೆ ಮೂಲಕ ಸ್ವಾಮೀಜಿಗೆ ನಮನ ಸಲ್ಲಿಸಲಾಯಿತು. ನಂತರ ಸಿಎಂ ಬೊಮ್ಮಾಯಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಇದಾದ ಬಳಿಕ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದ್ದು, ಜ್ಞಾನಯೋಗಾಶ್ರಮದ ಆವರಣದಲ್ಲಿ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ. ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ವಿಜಯಪುರದಲ್ಲಿ ಸೈನಿಕ ಶಾಲೆ ಆವರಣದಲ್ಲಿ ಸಿಎಂ ಬೊಮ್ಮಾಯಿ, ಯಡಿಯೂರಪ್ಪ , ಪ್ರಹ್ಲಾದ್ ಜೋಶಿ ಸೇರಿ , ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದರು.
BREAKING NEWS: ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ; ವಿದ್ಯುತ್ ಉತ್ಪಾದನೆ ಸ್ಥಗಿತ