ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರವನ್ನು ಸುಂದರ ಮತ್ತು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಗೌರವಿಸಲು ವಿಶೇಷ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.
ಕ್ಷೇತ್ರದ ಒಟ್ಟು 8 ವಾರ್ಡ್‌ಗಳ ಪೌರಕಾರ್ಮಿಕರಿಗಾಗಿ ಈ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕ್ಷೇತ್ರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಎಲ್ಲಾ ಪೌರಕಾರ್ಮಿಕ ಮಿತ್ರರು ಈ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮದ ಚಂದವನ್ನು ಹೆಚ್ಚಿಸಬೇಕೆಂದು ವಿನಂತಿಸಲಾಗಿದೆ.
ಕಾರ್ಯಕ್ರಮದ ವಿವರಗಳು:
-
ದಿನಾಂಕ: ಮಾರ್ಚ್ 8, 2026 (ಭಾನುವಾರ)
-
ಸಮಯ: ಬೆಳಿಗ್ಗೆ 10:30 ಗಂಟೆಗೆ
-
ನೇತೃತ್ವ: ಕೆ.ಜೆ. ಜಾರ್ಜ್ (ಗೌರವಾನ್ವಿತ ಇಂಧನ ಸಚಿವರು, ಕರ್ನಾಟಕ ಸರ್ಕಾರ ಹಾಗೂ ಸರ್ವಜ್ಞನಗರ ಕ್ಷೇತ್ರದ ಶಾಸಕರು)
ಪೌರಕಾರ್ಮಿಕರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಅವರನ್ನು ಅಭಿನಂದಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಆ ಮೂಲಕ ಸಚಿವ ಕೆ.ಜೆ ಜಾರ್ಜ್ ಅವರು ಪೌರ ಕಾರ್ಮಿಕರ ನಿಸ್ವಾರ್ಥ ಸೇವೆಯನ್ನು ಗುರುತಿಸಿ, ಗೌರವಿಸಲಿದ್ದಾರೆ.








