ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡ ಸ್ಟೇಯಾನ್ ಚೌಧರಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಭಾನುವಾರ ಗುಂಡಿಕ್ಕಿ ಕೊಂದಿದ್ದಾರೆ. ಹಾಡಹಗಲೇ ನಡೆದಂತ ಈ ಘಟನೆಯಿಂದ ಜನರು ಬೆಚ್ಚಿ ಬೀಳುವಂತೆ ಆಗಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನು ಹಾಡ ಹಗಲೇ ಬೈಕ್ ನಲ್ಲಿ ಬಂದಂತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದಂತ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ತೀವ್ರ ರಕ್ತಸ್ತ್ರಾವದಿಂದ ಅವರು ಆಸ್ಪತ್ರೆಗೆ ಸಾಗಿಸೋ ಮುನ್ನವೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಪಶ್ಚಿಮ ಬಂಗಾಳದ ಬಹರಾಂಪುರದಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಬೈಕುಗಳಲ್ಲಿ ಬಂದ ವ್ಯಕ್ತಿಗಳ ಗುಂಪು ಚೌಧರಿಯ ಮೇಲೆ ಹತ್ತಿರದಿಂದ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಂತ ಟಿಎಂಸಿ ಮುಖಂಡ ಸ್ಟೇಯಾನ್ ಚೌಧರಿ ಆಸ್ಪತ್ರೆಗೆ ಸಾಗಿಸೋ ಮಾರ್ಗಮಧ್ಯೆ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
BREAKING: ‘2024ರ ಆಷ್ಟ್ರೇಲಿಯನ್ ಓಪನ್ ಟೂರ್ನಿ’ಯಿಂದ ಹೊರಗುಳಿಯುವುದಾಗಿ ‘ರಾಫೆಲ್ ನಡಾಲ್’ ಘೋಷಣೆ
ಬೆಂಗಳೂರಲ್ಲಿ ‘ರೇಷ್ಮೆ ಭವನ’ ನಿರ್ಮಾಣಕ್ಕೆ ಹೂಡಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ