ಕೋಲ್ಕತ್ತಾ: ಇಂದು ಬೆಳಗ್ಗೆ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಅವರ ಇಬ್ಬರು ಸಹಚರರನ್ನು ಅಪರಿಚಿತ ವ್ಯಕ್ತಿಗಳು ಕೊಲೆಗೈದಿರುವ ಘಟನೆ ಕೋಲ್ಕತ್ತಾದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕ್ಯಾನಿಂಗ್‌ನಲ್ಲಿ ಜನನಿಬಿಡ ಪ್ರದೇಶದಲ್ಲಿ ನಡೆದಿದೆ.

ಪಶ್ಚಿಮ ಬಂಗಾಳದ ಆಡಳಿತ ಪಕ್ಷದ ಗೋಪಾಲ್‌ಪುರ ಗ್ರಾಮ ಪಂಚಾಯತ್ ಸದಸ್ಯ ಸ್ವಪನ್ ಮಾಝಿ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ ಸಭೆಗೆ ತೆರಳುತ್ತಿದ್ದಾಗ ಹಂತಕರು ಅವರ ಮೇಲೆ ಗುಂಡಿನ ದಾಳಿ ನಡೆಸಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಾರಿಯಾಗುತ್ತಿದ್ದಾಗ ಹಂತಕರು ಆತನ ಇಬ್ಬರು ಸಹಚರರ ಮೇಲೂ ಗುಂಡು ಹಾರಿಸಿದ್ದಾರೆ. ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share.
Exit mobile version