ಅಗರ್ತಲಾ (ತ್ರಿಪುರ): ಹಿರಿಯ ಸಚಿವ ಮತ್ತು ಬಿಜೆಪಿಯ ಮಿತ್ರಪಕ್ಷ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (ಐಪಿಎಫ್ಟಿ) ಅಧ್ಯಕ್ಷ ನರೇಂದ್ರ ಚಂದ್ರ ದೆಬ್ಬರ್ಮಾ(Narendra Chandra Debbarma) ಅವರು ದೀರ್ಘಕಾಲದ ಅನಾರೋಗ್ಯದ ನಂತರ ಭಾನುವಾರ ನಿಧನರಾದರು ಎಂದು ಕುಟುಂಬ ಮತ್ತು ಆಸ್ಪತ್ರೆ ಮೂಲಗಳು ತಿಳಿಸಿವೆ.
ಡಿಸೆಂಬರ್ 30 ರಂದು ತೀವ್ರ ಬ್ರೈನ್ ಸ್ಟ್ರೋಕ್ಗೆ ಒಳಗಾಗಿದ್ದ 80 ವರ್ಷದ ದೆಬ್ಬರ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ನಿಧನರಾಗಿದ್ದಾರೆ ಎಂದು ಕುಟುಂಬ ಮತ್ತು ಆಸ್ಪತ್ರೆ ಮೂಲಗಳು ತಿಳಿಸಿವೆ.
ತ್ರಿಪುರಾದ ಕಂದಾಯ ಸಚಿವರೂ ಆಗಿದ್ದ ಎನ್ಸಿ ದೆಬ್ಬರ್ಮಾ ನಿಧನರಾದ ಹಿನ್ನೆಲೆಯಲ್ಲಿ ತ್ರಿಪುರಾ ಸರ್ಕಾರ ಭಾನುವಾರದಿಂದ ಮೂರು ದಿನಗಳ ಶೋಕಾಚರಣೆ ಮತ್ತು ಸೋಮವಾರ ರಜೆ ಘೋಷಿಸಿದೆ. ದೆಬ್ಬರ್ಮಾ ಅವರು ತ್ರಿಪುರಾದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರು ಪತ್ನಿ, ನಾಲ್ವರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಪ್ರಧಾನಿ ಮೋದಿ ಅವರು ಟ್ವೀಟ್ ಮಾಡುವ ಮೂಲಕ ದೆಬ್ಬರ್ಮಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Shri NC Debbarma Ji will be remembered by the coming generations as a hardworking grassroots leader who always worked for the well-being of people. He made a rich contribution to Tripura’s progress. Pained by his demise. Condolences to his family and supporters. Om Shanti.
— Narendra Modi (@narendramodi) January 1, 2023
BIGG NEWS : ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗೆ ನೀಡಲಾಗಿದ್ದ ಸುತ್ತೋಲೆ ಹಿಂಪಡೆದ ರಾಜ್ಯ ಸರ್ಕಾರ