ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ಸ್ಫೋಟಕ ಹಂತಕ್ಕೆ ತಲುಪಿದೆ. ಇರಾನ್ ವಿರುದ್ಧದ ಕದನ ವಿರಾಮವನ್ನು ವಿಸ್ತರಿಸಲು ಅಮೆರಿಕ ನಿರಾಕರಿಸಿದ್ದು, ಯಾವುದೇ ಕ್ಷಣದಲ್ಲಿ ದಾಳಿ ನಡೆಸಲು “ಅಮೆರಿಕ ಸೇನೆ ಸನ್ನದ್ಧವಾಗಿದೆ” (Ready to go) ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಎಚ್ಚರಿಕೆ ನೀಡಿದ್ದಾರೆ.
ಇರಾನ್ ಜೊತೆಗಿನ ಕದನ ವಿರಾಮ ಒಪ್ಪಂದವನ್ನು ಮುಂದುವರಿಸುವ ಪ್ರಶ್ನೆಯೇ ಇಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. “ನಮ್ಮ ಸೈನ್ಯವು ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿಯಾಗಿದೆ. ಅಗತ್ಯ ಬಿದ್ದರೆ ಇರಾನ್ ಮೇಲೆ ಕಠಿಣ ಕ್ರಮ ಕೈಗೊಳ್ಳಲು ನಮ್ಮ ಕಮಾಂಡರ್ಗಳು ಆದೇಶಕ್ಕಾಗಿ ಕಾಯುತ್ತಿದ್ದಾರೆ,” ಎಂದು ಶ್ವೇತಭವನದಲ್ಲಿ ಟ್ರಂಪ್ ಗುಡುಗಿದ್ದಾರೆ.
ಇರಾನ್ ಬೆಂಬಲಿತ ಗುಂಪುಗಳಿಂದ ಅಮೆರಿಕದ ಹಿತಾಸಕ್ತಿಗಳ ಮೇಲೆ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.








