ಸುಭಾಷಿತ :

Tuesday, April 7 , 2020 5:54 PM

`ನಮಸ್ತೆ ಟ್ರಂಪ್’ ಇಂದು ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್


Monday, February 24th, 2020 6:35 am

ನವದೆಹಲಿ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎರಡು ದಿನಗಳ ಭಾರತದ ಭೇಟಿ ಇಂದಿನಿಂದ ಆರಂಭಗೊಳ್ಳಲಿದೆ. ಪತ್ನಿ ಮೆಲಾನಿಯಾ ಮತ್ತು ಉನ್ನತ ಮಟ್ಟದ ನಿಯೋಗದೊಂದಿಗೆ ಇಂದು ಬೆಳಗ್ಗೆ ಅಹ್ಮದಾಬಾದ್ ನ ಸರದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.

ಅಮೆರಿಕ ಅಧ್ಯಕ್ಷರನ್ನು ಸ್ವಾಗತಿಸಲು ಅಹಮದಾಬಾದ್, ಆಗ್ರಾ ಹಾಗೂ ನವದೆಹಲಿ ಮದುವಣಿಗಿತ್ತೆಯಂತೆ ಸಿಂಗಾರಗೊಂಡಿದೆ. ಭಾರೀ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ದೆಹಲಿ ಸೇರಿದಂತೆ ಟ್ರಂಪ್ ಹೋದಲ್ಲೆಲ್ಲ ಅವರಿಗೆ ಸಾಂಪ್ರದಾಯಿಕ ತಿಲಕ ಇಟ್ಟು, ಶಾಲು ಹೊದಿಸಿ ಸ್ವಾಗತಿಸಲು ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಂಗಳವಾರ ಟ್ರಂಪ್ ಅವರು ಸಾಬರಮತಿಯ ಗಾಂಧಿ ಆಶ್ರಮಕ್ಕೆ ಭೇಟಿ ನೀಡಿದ ಬಳಿಕ ಮಧ್ಯಾಹ್ನ ಆಗ್ರಾಹಕ್ಕೆ ತೆರಳಿ ವಿಶ್ವವಿಖ್ಯಾತ ತಾಜ್ ಮಹಲ್ ಅನ್ನು ವೀಕ್ಷಿಸಲಿದ್ದಾರೆ. ಸಂಜೆ ದೆಹಲಿಗೆ ನಿರ್ಗಮಿಸಲಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions