ಬೆಂಗಳೂರು: ರಾಜ್ಯದಲ್ಲಿ ಆರ್ ಎಸ್ ಎಸ್ ಬ್ಯಾನ್ ವಿವಾದ ತಾರಕಕ್ಕೇರುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ( BJP State President Nalin Kumar Kateel ) ಮಾತಿಗೆ ಕಾಂಗ್ರೆಸ್ ಮಾಡಿದ್ದ ಟ್ವಿಟ್ ಗೆ ವ್ಯಾಪಕ ಆಕ್ರೋಶ ಬಿಜೆಪಿಯಿಂದ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ( Minister Priyank Kharge ) ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗೆ ಅಲ್ಲ, ನಾವು ಸಂವಿಧಾನದ ಪವರ್ ತೋರಿಸುತ್ತೇವೆ ಎಂಬುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಬಿಜೆಪಿಗರು, ಪದೇ ಪದೇ, RSS ಬ್ಯಾನ್ ( RSS Ban ) ಮಾಡಿ ನೋಡಿ ಅಂತಿದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ ಎಂಬುದಾಗಿ ಗುಡುಗಿದ್ದಾರೆ.
ಈಗ ಒಂದೇ ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ, ಹೆಣದ ಮೇಲೆ ರಾಜಕೀಯ ಬೇಳೆ ಬೇಯಿಸುವ, ಅಸಂವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ. ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪವರ್ ನಾವು ತೋರಿಸುತ್ತೇವೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿಗರು, ಪದೇ ಪದೇ, RSS ಬ್ಯಾನ್ ಮಾಡಿ ನೋಡಿ ಅಂತಿದಾರೆ.
ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ.
ಈಗ ಒಂದೇ ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ, ಹೆಣದ ಮೇಲೆ ರಾಜಕೀಯ ಬೇಳೆ ಬೇಯಿಸುವ, ಅಸಂವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ.
ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪವರ್ ನಾವು ತೋರಿಸುತ್ತೇವೆ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) May 26, 2023
ಅಂದಹಾಗೆ ಕರ್ನಾಟಕ ಕಾಂಗ್ರೆಸ್ ಅಧಿಕೃತ ಟ್ವಿಟ್ ಖಾತೆಯಿಂದ ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು. ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು ಟ್ವಿಟ್ ಮಾಡಿ ತಿಳಿಸಲಾಗಿತ್ತು. ಇದಕ್ಕೆ ಬಿಜೆಪಿ ನಾಯಕರು ಸಿಡೆದ್ದು ಆಕ್ರೋಶ ಹೊರ ಹಾಕಿದ್ದರು.
ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು.
ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು.
ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ.ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು. pic.twitter.com/aVNnfCiStt
— Karnataka Congress (@INCKarnataka) May 26, 2023