ತುಮಕೂರು: ಇಂದು ಶಿರಾ ತಾಲೂಕಿನ ಬಾಲೇನಹಳ್ಳಿ ಬಳಿಯಲ್ಲಿ ನಡೆದಿದ್ದಂತ ಕ್ರೂಸರ್ –ಲಾರಿ ಮಧ್ಯದ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮತ್ತೊಬ್ಬರು ಸಾವಿನ್ನಪ್ಪಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
BIG NEWS: ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧವಿಲ್ಲ – ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬಾಲೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದ್ದಂತ ಕ್ರೂಸರ್-ಲಾರಿ ನಡುವಿನ ಭೀಕರ ಅಪಘಾತದಲ್ಲಿ, ಸ್ಥಳದಲ್ಲಿಯೇ 9 ಮಂದಿ ಸಾವನ್ನಪ್ಪಿದ್ದರು. ಈ ಅಪಘಾತದಲ್ಲಿ ಗಾಯಗೊಂಡಿದ್ದಂತ ಇಬ್ಬರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೀಗೆ ಚಿಕಿತ್ಸೆ ಪಡೆಯುತ್ತಿದ್ದಂತ ಓರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಅಂದಹಾಗೇ ಇಂದು ಶಿರಾ ಬಳಿ ನಡೆದಿದ್ದಂತ ಕ್ರೂಸರ್ ಕಾರಿನ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ 13 ಮಂದಿಗಾಯಗೊಂಡಿದ್ದರು. ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಸೇರಿದಂತೆ ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
BIG NEWS: ತುಮಕೂರು ಅಪಘಾತದಲ್ಲಿ 9 ಜನರ ಸಾವಿನ ಹಿಂದಿನ ರಹಸ್ಯ ಬಯಲು: ಏನದು ಗೊತ್ತಾ.? | Tumkur Accident
ಮೃತರನ್ನು ಶಿರಾ ತಾಲೂಕಿನ ಕರಕುಂದಾ ಗ್ರಾಮದ ಸುಜಾತಾ(25) ಮತ್ತು ವಿನೋದ (3), ವಡವಟ್ಟಿ ಗ್ರಾಮದ ಕ್ರೂಸರ್ ಚಾಲಕ ಕೃಷ್ಣಪ್ಪ(25), ಮೀನಾಕ್ಷಿ (28), ಕಸನದೊಡ್ಡಿ ಗ್ರಾಮದ ಬಸಮ್ಮ(50), ಪ್ರಭು ಎಂದು ಗುರುತಿಸಲಾಗಿದೆ. ಒಟ್ಟು 10 ಮಂದಿ ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.