ತುಮಕೂರು : ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ ದಲಿತ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ್ದ 21 ಆರೋಪಿಗಳಿಗೆ ಇದೀಗ ಜೀವಾವಧಿ ಶಿಕ್ಷೆ ಪ್ರಕಟಿಸಿ ತುಮಕೂರಿನ ಮೂರನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಿಂದ ಈ ಒಂದು ತೀರ್ಪು ಪ್ರಕಟಿಸಿ ಆದೇಶ ಹೊರಡಿಸಿದೆ. ಗೋಪಾಲಪುರ ಗ್ರಾಮದ 21 ಅಪರಾಧಿಗಳಿಗೆ ಇದೀಗ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ.
ತುಮಕೂರಿನ 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಲಿದೆ. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ಎಂದು ಕೋರ್ಟ್ ಆದೇಶಿಸಿದೆ. ಐಪಿಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ. ಜೀವಾವಧಿ ಶಿಕ್ಷೆ ಹಾಗೂ ಅಪರಾಧಿಗಳಿಗೆ ತಲಾ 13, 500 ದಂಡ ವಿಧಿಸಿ ಒಟ್ಟು 2,83,500 ತಂಡ ವಿಧಿಸಿದೆ.
ಪ್ರಕರಣ ಹಿನ್ನೆಲೆ?
2010 ಜೂನ್ 28 ರಂದು ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ ಡಾಬಾ ಹೊನ್ನಮ್ಮ ಎಂಬ ದಲಿತ ಮಹಿಳೆಯ ಕೊಲೆ ನಡೆದಿತ್ತು. ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಈ ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ಹೊನ್ನಮ್ಮ ದೂರು ನೀಡಿದ್ದರು.
ಇದರಿಂದ ಗ್ರಾಮಸ್ಥರು ಹಾಗೂ ಹೊನ್ನಮ್ಮ ಮಧ್ಯೆ ದ್ವೇಷ ಉಂಟಾಗಿ ಜಗಳ ನಡೆಯುತ್ತಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಆರೋಪಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು. ಇದೀಗ ತುಮಕೂರಿನ ಮೂರನೇ ಸೆಷನ್ಸ್ ನ್ಯಾಯಾಲಯವು 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.