ತುಮಕೂರು : ವ್ಯಕ್ತಿಯೊಬ್ಬನ ಮೃತ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆಗೈದು ನೇಣು ಬಿಗಿದಿರುವ ಶಂಕೆ ವ್ಯಕ್ತವಾಗುತ್ತಿದ್ದು, ಘಟನೆಯು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕುಣಿಕೇನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಹೌದು ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದ್ದು, ಮೃತನನ್ನು ಗೋಪಿ (35) ಎಂದು ಹೇಳಲಾಗುತ್ತಿದೆ. ಸಾವನ್ನಪ್ಪಿರುವ ಗೋಪಿ ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತೊರೆಮಾವಿನಹಳ್ಳಿ ಗ್ರಾಮದವನು ಎಂದು ತಿಳಿಬಂದಿದೆ.
ಸಾವಿನ ಬಗ್ಗೆ ಗೋಪಿ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದು ಯಾರೋ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಘಟನಾ ಸ್ಥಳಕ್ಕೆ ದಂಡಿನಶಿವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಂಡಿನಶಿವರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.