ತುಮಕೂರು : ಜಮೀನು ವಿವಾದ ವಿಚಾರಕ್ಕೆ ಎರಡು ಕುಟುಂಬಗಳ ಪರಸ್ಪರ ಬಡಿದಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರವಾದ ಗಾಯಗಳಾಗಿರುವ ಘಟನೇ ನಡೆದಿದೆ.
ಶಶಿಕುಮಾರ್, ಲಕ್ಷ್ಮಣಯ್ಯ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ, ಘಟನೆಯಲ್ಲಿ ಲಕ್ಷ್ಮಣಯ್ಯ ಗಂಭೀರ ಗಾಯಗೊಂಡಿದ್ದು, ತುರುವೇಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಗೇಗೌಡನಪಾಳ್ಯದ ಮಂಜುನಾಥ್,ಗಂಗಮ್ಮ,ನಾಗಯ್ಯ,ಮಂಜುನಾಥ ನ ತಾಯಿ,ಪತ್ನಿ ಹಲ್ಲೆ ಮಾಡಿದವರು.
ಲಕ್ಷ್ಮಣಯ್ಯ ಕುಟುಂಬಸ್ಥರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿರುವ ಮಂಜುನಾಥ್ ಕುಟುಂಬಸ್ಥರು ಲಕ್ಷ್ಮಣಯ್ಯರನ್ನ ನೀರಿನಲ್ಲಿ ಮುಳುಗಿಸಿ ಕುಡುಗೋಲು, ಕಲ್ಲಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ಲಕ್ಷ್ಮಣಯ್ಯ ಗಂಭೀರ ಗಾಯಗೊಂಡಿದ್ದು ಸದ್ಯ ತುರುವೇಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.