ತುಮಕೂರು: ತುಮಕೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬೆಂಕಿಕೊಂಡದಲ್ಲಿ ಬಿದ್ದ ಅರ್ಚಕ ಮತ್ತು ಮಗ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಗ್ಗೆರೆ ಗ್ರಾಮದ ಶ್ರೀ ದಂಡಿನ ಮಾರಮ್ಮ ದೇವಿ ಜಾತ್ರಾ ಪ್ರಯುಕ್ತ ನಡೆದ ಬೆಂಕಿಕೊಂಡ ಹಾಯುವಾಗ ಬಿದ್ದು ಅರ್ಚಕ ವೆಂಕಟಪ್ಪ ಹಾಗೂ ಮಗ ಕೃಷ್ಣ ಮೂರ್ತಿ ಸಾವನ್ನಪ್ಪಿದ್ದಾರೆ.
ಗಾಯಗೊಂಡಿದ್ದ ಇಬ್ಬರನ್ನೂ ಬೆಳ್ಳೂರು ಕ್ರಾಸ್ ಆದಿಚುಂಚನಗಿರಿ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅರ್ಚಕ ಹಾಗೂ ಅವರ ಪುತ್ರ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.