ನವದೆಹಲಿ : ತುಮಕೂರಿನ ತ್ರಿವಿಧ ದಾಸೋಹಕ್ಕೆ ಹೆಸರಾಗಿದ್ದ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ತುಮಕೂರು ರೈಲು ನಿಲ್ದಾಣಕ್ಕೆ ಇಡಬೇಕು ಎಂದು ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸೋಮಣ್ಣ, 30 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿದ್ದು, ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿಯ ಕುರಿತಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಧಾನಿಗೆ ವಿವರಿಸಿದ್ದಾರೆ.
ತುಮಕೂರು ಜಿಲ್ಲೆಯ ಅಭಿವೃದ್ಧಿಯ ಕುರಿತಾಗಿ ಕೆಲವು ವಿಶೇಷ ಪ್ರಸ್ತಾವನೆಗಳನ್ನು ಪ್ರಧಾನಮಂತ್ರಿಗಳಿಗೆ ಮಂಡಿಸಿದ್ದು, ತಮ್ಮ ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ತುಮಕೂರು– ರಾಯದುರ್ಗ ಮತ್ತು ತುಮಕೂರು- ಚಿತ್ರದುರ್ಗ- ದಾವಣಗೆರೆ ರೈಲ್ವೆ ಮಾರ್ಗವನ್ನು ಜೂನ್ 2027ರಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆಯೂ ಮೋದಿ ಅವರಿಗೆ ಸೋಮಣ್ಣ ಮನವಿ ಮಾಡಿದ್ದಾರೆ.
Called on Hon'ble Prime Minister Shri @narendramodi Ji in New Delhi today. Had an insightful discussion on key developments, and updated him on the progress of various railway projects in the State. Deeply grateful for his unwavering support and guidance in advancing these… pic.twitter.com/0uXhnGqACg
— V. Somanna (@VSOMANNA_BJP) October 8, 2024