Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಪೂರ್ಣ ಪಠ್ಯ ವಿಳಂಬಕ್ಕೆ ಪಾಕಿಸ್ತಾನವೇ ಕಾರಣ: ಜೆ.ಡಿ. ವ್ಯಾನ್ಸ್ ಸ್ಫೋಟಕ ಮಾಹಿತಿ ಬಹಿರಂಗ!

Watch Video: ನ್ಯೂಯಾರ್ಕ್ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ತಪ್ಪಿದ ಭಾರೀ ದುರಂತ; 16 ಪ್ರವಾಸಿಗರು ಕೊನೆಗೂ ಸೇಫ್

BREAKING: ಮಹಾರಾಷ್ಟ್ರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತುಮಕೂರಿನ ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗಾ ಶ್ರೀಗಳ ಹೆಸರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಣೆ
KARNATAKA

ತುಮಕೂರಿನ ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗಾ ಶ್ರೀಗಳ ಹೆಸರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಣೆ

By ವಸಂತ ಬಿ ಈಶ್ವರಗೆರೆ

ತುಮಕೂರು : ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿತ್ತು. ಈ ಬಗ್ಗೆ ಮುಖ್ಯಮಂತ್ರಿಯವರ ಜೊತೆಗೆ ಮಾತನಾಡಿ, ಅವರ ಒಪ್ಪಿಗೆ ಪಡೆದು ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು‌.

ಸಿದ್ಧಗಂಗ ಮಠಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿ ಶ್ರೀ ಸಿದ್ಧಲಿಂಗೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದು, ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ತುಮಕೂರು ರೈಲ್ವೇ ನಿಲ್ದಾಣ ಸ್ವಾಮೀಜಿ ಅವರ ಹೆಸರಿನಲ್ಲಿ ಶಾಶ್ವತವಾಗಿ ಇರುತ್ತದೆ. ಅದು‌ ನಾವು ಅವರಿಗೆ ಕೊಡುವ ಗೌರವ. ಈ ಬಗ್ಗೆ ಸೋಮಣ್ಣನವರು ಒತ್ತಾಯ ಮಾಡಿದ್ದರು. ಈಗಾಗಲೇ ರೈಲ್ವೆ ಇಲಾಖೆಯಿಂದ ಕೇಂದ್ರದಲ್ಲಿ ಮಂಜೂರು ಮಾಡಿಸಿದ್ದಾರೆ. ಶ್ರೀಗಳ ಹೆಸರಿಡಲು ತಡವಾಗಿಲ್ಲ. ಸರ್ಕಾರದಲ್ಲಿ ಕೆಲವು ಪ್ರಕ್ರಿಯೆಗಳು ಇರುತ್ತವೆ. ರಸ್ತೆ, ವೃತ್ತ, ಕಟ್ಟಡಕ್ಕೆ ಹೆಸರಿಡಬೇಕಾದರೆ ಪ್ರಸ್ತಾವನೆಗಳು ಬಂದಾಗ ಪರಿಶೀಲನೆ ಮಾಡಿ, ಸಾಧಕ ಭಾದಕಗಳನ್ನ ನೋಡಿ ಸರ್ಕಾರ ಅನುಮತಿ ಕೊಡುತ್ತದೆ ಎಂದರು.

ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನಾಚರಣೆಗೆ ಬರಲು ಆಗಿರಲಿಲ್ಲ. ಇವತ್ತು ಸ್ವಾಮೀಜಿಗೆ ಗೌರವ ಸಮರ್ಪಣೆ ಮಾಡಲು ಬಂದಿದ್ದೇನೆ. ಸಿದ್ದಲಿಂಗಸ್ವಾಮೀಜಿಗೆ ನಮನ ಸಲ್ಲಿಸಿದ್ದೇನೆ. ನಮ್ಮ ಕುಟುಂಬಕ್ಕೂ ಮಠಕ್ಕೂ ಅವಿನಾಭವ ಸಂಬಂಧವಿದೆ. ನಮ್ಮ ತಂದೆ ಹಾಗೂ ಹಿರಿಯ ಸ್ವಾಮೀಜಿಯವರ ಜೊತೆಗೆ ಇದ್ದಂತಹ ಸಂಬಂಧ ಯಾವಾಗಲೂ ಇರುತ್ತದೆ. ಈ ಸಂಬಂಧವನ್ನು ನಾವು ಮುನ್ನಡೆಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.

ಹೆಸರಿಡಲು ತಡವಾಗಿಲ್ಲ. ಸರ್ಕಾರದಲ್ಲಿ ಕೆಲವು ಪ್ರಕ್ರಿಯೆಗಳು ಇರುತ್ತದೆ. ರಸ್ತೆ, ವೃತ್ತ, ಕಟ್ಟಡಕ್ಕೆ ಹೆಸರಿಡಬೇಕಾದರೆ ಪ್ರಸ್ತಾವನೆಗಳು ಬಂದಾಗ ಪರಿಶೀಲನೆ ಮಾಡಿ, ಸಾಧಕ ಭಾದಕಗಳನ್ನ ನೋಡಿ ಸರ್ಕಾರ ಅನುಮತಿ ಕೊಡುತ್ತದೆ.

ಭದ್ರಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಬೇಕು ಎಂದು ಕೇಂದ್ರಕ್ಕೆ ಒತ್ತಾಯ ಮಾಡಿದ್ದೆವು. ಎರಡು ವರ್ಷದ ಹಿಂದೆ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 5300 ಕೋಟಿ ರೂ. ಅನುದಾನ ನೀಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದರು. ನಾವೆಲ್ಲ ಬಹಳ ಸಂತೋಷದಲ್ಲಿ ಇದ್ದೆವು. ಈ ಬಹಳ ದೊಡ್ಡ ಯೋಜನೆ, ಬಹಳ ತಾಲ್ಲೂಕುಗಳಿಗೆ ಅನುಕೂಲವಾಗಲಿದೆ. ಕಾರಣಾಂತರಗಳಿಂದ ಹಣ ಅವರು ಕೊಡಲು ಆಗಿರಲಿಲ್ಲ. ಆದರು ಯೋಜನೆ ನಿಲ್ಲುವಂತಿಲ್ಲ. ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಬೇಕು ಅಂತ ಮುಂದಾಗಿದ್ದೇವೆ. ಕೆಲ ಕಡೆ ಅರಣ್ಯ ಬರುವುದರಿಂದ ತಡವಾಗಿದೆ ಎಂದು ತಿಳಿಸಿದರು.

ಮಧುಗಿರಿ‌ಯ ಕೆಲ ಭಾಗಕ್ಕೆ ನೀರು ಬರಲಿದೆ. ಪಾವಗಡಕ್ಕೆ ಈಗಾಗಲೇ ನೀರು ಬರುತ್ತಿದೆ. 2300 ಕೋಟಿ ರೂ. ಕುಡಿಯುವ ನೀರಿನ ಯೋಜನೆ ಮಾಡಿದ್ದೆವು. ಚಳ್ಳಕೆರೆ, ಕೂಡ್ಲಿಗಿ, ಹಿರಿಯೂರು ಎಲ್ಲಾ ಕಡೆಗೂ ನೀರು ಬರುತ್ತದೆ. ಪಾವಗಡಕ್ಕೆ ಈಗಾಗಲೇ 328 ಹಳ್ಳಿಗಳ ಪೈಕಿ 270 ಹಳ್ಳಿಗಳಿಗೆ ನೀರು ಕೊಡುತ್ತಿದ್ದೇವೆ. ಮುಖ್ಯಮಂತ್ರಿಯವರು ಸದ್ಯದಲ್ಲೇ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.

ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಯುತ್ತಿದೆ. ಪ್ರತಿವರ್ಷ ಹಣ ಬಿಡುಗಡೆ ಮಾಡುತ್ತಿದ್ದೇವೆ. ಆರ್ಥಿಕ ವ್ಯವಸ್ಥೆಯಲ್ಲಿ ಎಷ್ಟು ಸಾಧ್ಯವಿದೆಯೋ ಅಷ್ಟು ಹಣ ನೀಡುತ್ತಿದ್ದೇವೆ. ಬರುವ ಜೂನ್‌ ವೇಳೆಗೆ ಅರಸಿಕೆರೆಗೆ ನೀರು ತಲುಪಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಎರಡು-ಮೂರು ಕಡೆ ಅರಣ್ಯ ಭೂಮಿಯಿಂದ ಸಮಸ್ಯೆಯಾಗಿದೆ. ಅದು ಬಗೆಹರಿದರೆ 2026ರ ಜೂನ್‌ಗೆ ತುಮಕೂರಿಗೆ ಎತ್ತಿನಹೊಳೆ ನೀರು ಬರುತ್ತದೆ. ಮುಂದೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ಹೋಗುತ್ತದೆ ಎಂದರು.

ಸದ್ಯ ತುಮಕೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆಯಿಲ್ಲ. ಬುಗಡನಹಳ್ಳಿ ಕೆರೆಯಲ್ಲಿ ಶೇಖರಣೆ ಮಾಡಿರುವ ನೀರು ಜೂನ್, ಜುಲೈ ತಿಂಗಳವರೆಗೆ ಆಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಹೇಳುತ್ತಿದ್ದಾರೆ. ಮೇ ತಿಂಗಳಲ್ಲಿ ಹೇಮಾವತಿಯಿಂದ ಎರಡು ಟಿಎಂಸಿ ನೀರು ಬಿಡಿಸುವಂತೆ ಹಾಸನ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರ ಜೊತೆಗೆ ಮಾತನಾಡುತ್ತೇನೆ‌ ಎಂದು ತಿಳಿಸಿದರು.

ಎಐಸಿಸಿ ಅಧಿವೇಶನಕ್ಕೆ ಗೈರಾದ ವಿಚಾರದ ಕುರಿತು ಮಾತನಾಡಿ, ಎಐಸಿಸಿ ಅಧಿವೇಶನಕ್ಕೆ ಆಹ್ವಾನ ಇರುತ್ತದೆ. ನಾವೆಲ್ಲಾ ಎಐಸಿಸಿ ಸದಸ್ಯರಿದ್ದೇವೆ. ಕಾರಣಾಂತರಗಳಿಂದ ಹೋಗಲು ಆಗಿಲ್ಲ ಎಂದರು.

ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರದ ಕುರಿತು ಮಾತನಾಡಿ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಸೇರಿ 35 ಜನ ಶಾಸಕರು ಬರೆದಿರುವ ಪತ್ರವನ್ನು ಕೇಂದ್ರ ಸರ್ಕಾರ ಪರಿಗಣಿಸಬೇಕು. ಶಿರಾ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದರೆ ನಮಗೆ ಸಂತೋಷವಾಗುತ್ತೆ ಎಂದರು

ಈಗಾಗಲೇ ಎರಡು ಕಡೆ ಸರ್ವೆ ಮಾಡಿದ್ದಾರೆ. ಒಂದು ನೆಲಮಂಗಲ, ಕನಕಪುರ ಭಾಗದಲ್ಲಿ ಸರ್ವೆ ಆಗಿದೆ. ವಿಮಾನ ನಿಲ್ದಾಣ ಮಾಡಲು ಅವರದ್ದೇ ಆದ ಮಾನದಂಡಗಳಿರುತ್ತವೆ. ಅದರಂತೆಯೇ ಶಿಫಾರಸ್ಸು ಮಾಡುತ್ತಾರೆ. ಶಿರಾಗೆ ಸರ್ವೆ ಮಾಡಲು ಬಂದಿಲ್ಲ. ಇದಕ್ಕೆ ಪರಿಗಣಿಸಿದರೆ ಬಹಳ ಅನುಕೂಲವಾಗಲಿದೆ. ತುಮಕೂರು ಜಿಲ್ಲೆಯ ವಸಂತನರಸಾಪುರ, ಶಿರಾ ಭಾಗದಲ್ಲಿ ಎಲ್ಲಿಯೇ ವಿಮಾನ ನಿಲ್ದಾಣವಾದರೆ ಸುಮಾರು 20 ಜಿಲ್ಲೆಗಳಿಗೆ ಅನುಕೂಲವಾಗಲಿದೆ. ವಿಮಾನ ನಿಲ್ದಾಣ ಯೋಜನೆಯನ್ನು ಯಾರು ಹೈಜಾಕ್ ಮಾಡಲು ಆಗುವುದಿಲ್ಲ. ತಾಂತ್ರಿಕ ಸಾಧ್ಯತೆಗಳ ಮೇಲೆ ನಿರ್ಮಿಸಲಾಗುತ್ತದೆ ಎಂದು ಹೇಳಿದರು.

BREAKING: ಮನೆಯಲ್ಲಿ ಮರ ಕೆಲಸ ಮಾಡುತ್ತಿದ್ದಾಗಲೇ ವಿದ್ಯುತ್ ಸ್ಪರ್ಷಿಸಿ ಇಬ್ಬರು ಯುವಕರು ದುರ್ಮರಣ

ಜನ ಬೇಸತ್ತಿರುವುದಕ್ಕೆ ಜನಾಕ್ರೋಶಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ: ಆರ್.ಅಶೋಕ್

BIG NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

Share. Facebook Twitter LinkedIn WhatsApp Email

Related Posts

dk shivakumar

ಬಿಡದಿ ಯೋಜನೆ ಕುಮಾರಸ್ವಾಮಿ ಅವರದ್ದೇ : ಸಿಎಂ ಡಿ.ಕೆ. ಶಿವಕುಮಾರ್

2 Mins Read

ಬೆಂಗಳೂರು ಜನತೆ ಗಮನಕ್ಕೆ; ಜೂನ್.22ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut in Bengaluru

2 Mins Read

ಕೃಷಿ ಅಧಿಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿದ ಕೆಇಎ!

1 Min Read
Recent News

​ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಪೂರ್ಣ ಪಠ್ಯ ವಿಳಂಬಕ್ಕೆ ಪಾಕಿಸ್ತಾನವೇ ಕಾರಣ: ಜೆ.ಡಿ. ವ್ಯಾನ್ಸ್ ಸ್ಫೋಟಕ ಮಾಹಿತಿ ಬಹಿರಂಗ!

Watch Video: ನ್ಯೂಯಾರ್ಕ್ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ತಪ್ಪಿದ ಭಾರೀ ದುರಂತ; 16 ಪ್ರವಾಸಿಗರು ಕೊನೆಗೂ ಸೇಫ್

BREAKING: ಮಹಾರಾಷ್ಟ್ರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

BREAKING: ​ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಕುಸಿದುಬಿದ್ದ ಹನುಮಾನ್ ದೇವಸ್ಥಾನದ ಮೇಲ್ಛಾವಣಿ! ಹಲವರಿಗೆ ಗಂಭೀರ ಗಾಯ

State News
dk shivakumar KARNATAKA

ಬಿಡದಿ ಯೋಜನೆ ಕುಮಾರಸ್ವಾಮಿ ಅವರದ್ದೇ : ಸಿಎಂ ಡಿ.ಕೆ. ಶಿವಕುಮಾರ್

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 2 Mins Read

ಬೆಂಗಳೂರು: “ಬಿಡದಿಯ ರೈತರು ಮುಗ್ಧರು ಮತ್ತು ಒಳ್ಳೆಯವರು, ಆದರೆ ಅವರನ್ನು ದಾರಿ ತಪ್ಪಿಸಲಾಗುತ್ತಿದೆ. ಈ ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ…

ಬೆಂಗಳೂರು ಜನತೆ ಗಮನಕ್ಕೆ; ಜೂನ್.22ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut in Bengaluru

ಕೃಷಿ ಅಧಿಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿದ ಕೆಇಎ!

BREAKING: ಜುಲೈ.6ಕ್ಕೆ ಕರ್ನಾಟಕ ಸಿಇಟಿ ಸೀಟು ಹಂಚಿಕೆ ಅಣಕು ಫಲಿತಾಂಶ ಪ್ರಕಟ | Karnataka CET Results

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : [email protected]

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

[email protected]

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.