ಬೆಂಗಳೂರು : ತುಮಕೂರು ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ( Tumkur Accident ) ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ತುಮಕೂರು ಬಳಿ 9 ಕೂಲಿ ಕಾರ್ಮಿಕರು ತೀವ್ರವಾದ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ. ಇದು ಬಹಳ ದುರ್ದೈವದ ಸಂಗತಿ. ದುಡಿಮೆ ಮಾಡಲು ಬಂದವರ ಬದುಕೇ ಇಲ್ಲದಂತಾಗಿರುವುದು ದಿಗ್ಭ್ರಮೆ ಹುಟ್ಟಿಸಿದೆ ಎಂದರು.
ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಮೃತಪಟ್ಟವರಿಗೆ ಪ್ರಧಾನಮಂತ್ರಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿ, ಮೃತಪಟ್ಟವರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಿದ್ದಾರೆ. ಇದಕ್ಕಾಗಿ ಪ್ರಧಾನ ಮಂತ್ರಿಯವರನ್ನು ಅಭಿನಂದಿಸುತ್ತೇನೆ. ಅಪಘಾತದ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
BIG NEWS: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್: KSRTCಯಿಂದ 500 ಹೆಚ್ಚುವರಿ ಬಸ್ ಸಂಚಾರ ವ್ಯವಸ್ಥೆ