ಬೆಂಗಳೂರು : ತುಮಕೂರು ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ( Tumkur Accident ) ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.

BREAKING NEWS: ಕೇಂದ್ರ ಸರ್ಕಾರದಿಂದ ‘ಭಾರತ್’ ಬ್ರಾಂಡ್ ಅಡಿಯಲ್ಲಿ ‘ಒಂದು ರಾಷ್ಟ್ರ ಒಂದು ರಸಗೊಬ್ಬರ’ ಯೋಜನೆ ಜಾರಿ: ಇಲ್ಲಿದೆ ಸಂಪೂರ್ಣ ಮಾಹಿತಿ | One Nation One Fertiliser scheme

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,  ತುಮಕೂರು ಬಳಿ 9 ಕೂಲಿ ಕಾರ್ಮಿಕರು ತೀವ್ರವಾದ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ. ಇದು ಬಹಳ ದುರ್ದೈವದ ಸಂಗತಿ. ದುಡಿಮೆ ಮಾಡಲು ಬಂದವರ ಬದುಕೇ ಇಲ್ಲದಂತಾಗಿರುವುದು ದಿಗ್ಭ್ರಮೆ ಹುಟ್ಟಿಸಿದೆ ಎಂದರು.

BREAKING NEWS: ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯಕ್ಕೆ ಐಸಿಸಿ ಟಿಕೆಟ್ ಬಿಡುಗಡೆ | IND v PAK, Men’s T20 World Cup 2022

ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಮೃತಪಟ್ಟವರಿಗೆ ಪ್ರಧಾನಮಂತ್ರಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿ, ಮೃತಪಟ್ಟವರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಿದ್ದಾರೆ. ಇದಕ್ಕಾಗಿ ಪ್ರಧಾನ ಮಂತ್ರಿಯವರನ್ನು ಅಭಿನಂದಿಸುತ್ತೇನೆ. ಅಪಘಾತದ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

BIG NEWS: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್: KSRTCಯಿಂದ 500 ಹೆಚ್ಚುವರಿ ಬಸ್ ಸಂಚಾರ ವ್ಯವಸ್ಥೆ

Share.
Exit mobile version