ತುಮಕೂರು : ಅತ್ತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮನನೊಂದ ಸೊಸೆಯೊಬ್ಬಳು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ವೀರಸಂದ್ರದಲ್ಲಿ ಈ ಒಂದು ಘಟನೆ ನಡೆದಿದೆ. ಕ್ರಿಮಿನಾಶಕ ಸೇವಿಸಿ ಸುಮಲತಾ (37)ಎನ್ನುವ ಸೊಸೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತಕ್ಷಣ್ ಸುಮಲತಾಳನ್ನು ಕೆ.ಬಿ ಕ್ರಾಸ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 18 ವರ್ಷಗಳ ಹಿಂದೆ ನರಸಿಂಹಮೂರ್ತಿ ಜೊತೆಗೆ ಸುಮಲತಾ ವಿವಾಹವಾಗಿದ್ದರು. ಒಂದುವರೆ ವರ್ಷದ ಹಿಂದೆ ಅನಾರೋಗ್ಯದಿಂದ ಪತಿ ನರಸಿಂಹಮೂರ್ತಿ ಸಾವನ್ನಪ್ಪಿದ್ದಾರೆ. ಪತಿ ಮೃತಪಟ್ಟ ನಂತರ ಅತ್ತೆ ಲಕ್ಕಮ್ಮ ಸೇರಿದಂತೆ ಹಲವರು ಸುಮಲತಾಗೆ ಕಿರುಕುಳ ನೀಡುತ್ತಿದ್ದಾರೆ. ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.