ತುಮಕೂರು : ಸಾವು ಯಾವಾಗ ಹೇಗೆ ಯಾವ ರೂಪದಲ್ಲಿ ಬರುತ್ತೆ ಅನ್ನೋದಕ್ಕೆ ಹೇಳೋಕೆ ಆಗಲ್ಲ. ಮನೆ ಸಮೀಪದ ಬೀದಿದೀಪ ಆರಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಶಿಕ್ಷಕರೋಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬ್ಯಾಡಗೆರೆ ಎಂಬಲ್ಲಿ ನಡೆದಿದೆ.
ಮೃತರನ್ನು ಬ್ಯಾಡಗೆರೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ನಿಟ್ಟೂರು ಗ್ರಾಮದ ಲೋಕೇಶ್ ರಾವ್ (35) ಎದು ತಿಳಿದುಬಂದಿದ್ದು, ಇಂದು ಬೆಳಗ್ಗೆ ಮನೆ ಸಮೀಪದ ಬೀದಿದೀಪ ಆರಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಬೀದಿ ದೀಪಗಳಿಗೆ ಅಳವಡಿಸಿರುವ ವೈರ್ ಗಳಿಗೆ ಸ್ವಿಚ್ ಹಾಕದೆ ಇರುವುದರಿಂದ ಈ ದುರಂತ ಸಂಭವಿಸಿದೆ ಎಂದು ಬೆಸ್ಕಾಂ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.