ತುಮಕೂರು: ಇಂದು ಬೆಳಗ್ಗೆ ಹಾಲು ಕರೆಯಲು ಹೋದ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರ ತಾಲೂಕಿನ ಇರಕಸಂದ್ರ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಗಾಯಗೊಂಡಿರುವವರನ್ನು ಧನುಷ್ (13) ಹಾಗೂ ಚೇತನ್ (15) ಅಂತ ತಿಳಿದು ಬಂದಿದ್ದು, ಅವಘಡದಲ್ಲಿ ಇಬ್ಬರು ಬಾಲಕರ ಕಾಲಿಗೆ ಗಾಯವಾಗಿದ್ದು, ಸದ್ಯ ಇಬ್ಬರನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಘಟನೆ ನಡೆದ ವೇಳೆಯಲ್ಲಿ ಚಿಕಿತ್ಸೆಗಾಗಿ ಬಾಲಕರ ತಂದೆ ಕೆಂಪರಾಜು ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದಾರೆ, ಆದರೆ ಆಂಬ್ಯುಲೆನ್ಸ್ ಇಲ್ಲ ಎನ್ನುವ ಉತ್ತರ ಸಿಕ್ಕಿದೆ ಎನ್ನಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೆಂಪರಾಜು ಖಾಸಗಿ ಆಂಬ್ಯುಲೆನ್ಸ್ ನೆರವಿನೊಂದಿಗೆ ಕೊರಟಗೆರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಅಲ್ಲೇ ಎರಡು ಆಂಬ್ಯುಲೆನ್ಸ್ ಇರೋದನ್ನು ಕಂಡು ಬಾಲಕರ ಕಡೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಘಟನೆ ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.