ತುಮಕೂರು : ಶಾರ್ಟ್ ಸರ್ಕ್ಯೂಟ್ ನಿಂದ ಲೇಡೀಸ್ ಹಾಸ್ಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ತುಮಕೂರು ನಗರದ ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರೂ ವಿದ್ಯಾರ್ಥಿನಿರು ಅಸ್ವಸ್ಥರಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆಯು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿನಿಯರು ಆತಂಕದಿಂದ ಹೊರಬಂದು ಪ್ರಾಣವನ್ನು ರಕ್ಷಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ಹೊಗೆಯಿಂದ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್‌ನಲ್ಲಿ 300 ವಿದ್ಯಾರ್ಥಿನಿಯರು ಇದ್ದರು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್ ಹಾಗೂ ವಿದ್ಯಾರ್ಥಿನಿಯರ ಜೊತೆ ಡಿಸಿ ಶುಭಕಲ್ಯಾಣ್ ಅವರು ಮಾತುಕತೆ ನಡೆಸಿ, ಘಟನೆ ಬಗ್ಗೆ ಮಾಹಿತಿಯನ್ನ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ ಹೊಸ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.