ಸುಭಾಷಿತ :

Tuesday, January 28 , 2020 2:09 PM

ಬ್ರೇಕಿಂಗ್ ನ್ಯೂಸ್ : ಕೊರಟಗೆರೆ ಬಳಿ ಖಾಸಗಿ ಬಸ್ ಪಲ್ಟಿ ಪ್ರಕರಣ : ರಾಜ್ಯ ಸರ್ಕಾರದಿಂದ ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ ಘೋಷಣೆ


Tuesday, November 5th, 2019 6:37 pm

ತುಮಕೂರು : ಕಳೆದ ಅಕ್ಟೋಬರ್ 30ರಂದು ಜಿಲ್ಲೆಯಲ್ಲಿ ಖಾಸಗಿ ಬಸ್ ಒಂದು ಕೊರಟಗೆರೆಯಿಂದ ತುಮಕೂರು ಕಡೆಗೆ ತೆರಳುತ್ತಿದ್ದ ವೇಳೆ ಜೆಟ್ಟಿ ಅಗ್ರಹಾರದ ಬಳಿ ಪಲ್ಟಿಯಾಗಿತ್ತು. ಇಂತಹ ಸಂದರ್ಭದಲ್ಲಿ ಸ್ಥಳದಲ್ಲದೇ ಐವರು ಸಾವನ್ನಪ್ಪಿದ್ದರು. ಇದೀಗ ಇಂತಹ ಸಾವನ್ನಪ್ಪಿದ ಕುಟುಂಬಗಳಿಗೆ ಸರ್ಕಾರದಿಂದ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ತುಮಕೂರು ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮದ ಸಮೀಪ ಸಂಭವಿಸಿದ ಬಸ್ಸು ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಪರಿಹಾರವನ್ನು ನೀಡುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.

ಅಂದಹಾಗೇ ಈ ಪ್ರಕರಣ ಕುರಿತಂತೆ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮೃತರಿಗೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವ ಪ್ರಯತ್ನ ಮಾಡುವುದಾಗಿ ತಿಳಿಸಿದ್ದರು. ಅಲ್ಲದೇ ಗಾಯಾಳುಗಳ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಜೆಸಿ ಮಾಧುಸ್ವಾಮಿ, ಗಾಯಾಳುಗಳಿಗೆ ಸಾಂತ್ವಾನ ಹೇಳಿದ್ದಲ್ಲದೇ, ಸರ್ಕಾರಿಂದ ಪರಿಹಾರ ಕೊಡಿಸುವ ಭರವಸೆ ಕೂಡ ನೀಡಿದ್ದರು. ಈ ಎಲ್ಲಾ ಬೆಳವಣಿಗೆಯ ನಂತ್ರ, ಸರ್ಕಾರ ಇದೀಗ ಮೃತ ಕುಟುಂಬಗಳಿಗೆ ರೂ.2 ಲಕ್ಷ ಪರಿಹಾರವನ್ನು ಘೋಷಿಸಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions