ಕೋಲ್ಕತ್ತಾ: ಇಸ್ತಾನ್ಬುಲ್ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ಟರ್ಕಿಶ್ ಏರ್ಲೈನ್ಸ್ ವಿಮಾನವು ಗುರುವಾರ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 69 ವರ್ಷದ ಪ್ರಯಾಣಿಕರೊಬ್ಬರು ತೀವ್ರ ಅಸ್ವಸ್ಥಗೊಂಡ ಪರಿಣಾಮ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ʻಪ್ರಯಾಣದ ವೇಳೆ ವಯಸ್ಸಾದ ಪ್ರಯಾಣಿಕರು ಅಸ್ವಸ್ಥರಾಗಿದ್ದು, ಮೂಗು ಮತ್ತು ಬಾಯಿಯಿಂದ ರಕ್ತಸ್ರಾವವಾಗುತ್ತಿತ್ತು. ಅವರ ಸ್ಥಿತಿಯನ್ನು ಕಂಡ ಟರ್ಕಿಶ್ ಏರ್ಲೈನ್ಸ್ ವಿಮಾನ TK-054 ನ ಪೈಲಟ್ ಕೋಲ್ಕತ್ತಾದ NSC ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲು ನಿರ್ಧರಿಸಿದರುʼಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏರ್ ಟ್ರಾಫಿಕ್ ಕಂಟ್ರೋಲ್ನಿಂದ ಅನುಮತಿ ಪಡೆದ ನಂತರ, ವಿಮಾನವು ಗುರುವಾರ ಬೆಳಿಗ್ಗೆ 11.45 ಕ್ಕೆ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಅಸ್ವಸ್ಥ ಪ್ರಯಾಣಿಕನಿಗೆ ಆರಂಭದಲ್ಲಿ ವಿಮಾನ ನಿಲ್ದಾಣದಲ್ಲೇ ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇತರ ಎಲ್ಲಾ ಪ್ರಯಾಣಿಕರೊಂದಿಗೆ ವಿಮಾನವು ಮಧ್ಯಾಹ್ನ 2.52 ಕ್ಕೆ ತನ್ನ ಪ್ರಯಾಣವನ್ನು ಪುನರಾರಂಭಿಸಿತು ಎಂದು ಅವರು ಹೇಳಿದರು.
BIG NEWS: ತನ್ನ ವಿಚ್ಛೇದಿತ ಪತ್ನಿ ಮತ್ತು ಅಪ್ರಾಪ್ತ ಮಕ್ಕಳಿಗೆ ಜೀವನಾಂಶ ನೀಡುವುದು ಗಂಡನ ಕರ್ತವ್ಯ: ಸುಪ್ರೀಂ ಕೋರ್ಟ್
Pro Kabaddi 2022: ಇಂದಿನಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ʻಪ್ರೊ ಕಬಡ್ಡಿʼ ಹಬ್ಬ
BIG NEWS: 2022-23ರಲ್ಲಿ ಭಾರತದ ‘GDP ಬೆಳವಣಿಗೆ’ ಶೇ.6.5ಕ್ಕೆ ಇಳಿಸಿದ ‘ವಿಶ್ವಬ್ಯಾಂಕ್’ |World Bank Cuts GDP