Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

ಟೀಂ ಇಂಡಿಯಾ ವೈಟ್-ಬಾಲ್ ನಾಯಕತ್ವದ ರೇಸ್‌’ನಲ್ಲಿ ‘ಶ್ರೇಯಸ್ ಅಯ್ಯರ್’ ; ವರದಿ

07/06/2025 9:01 PM

KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ ಅಂಗೀಕಾರ: ಅಧ್ಯಕ್ಷ ರಘುರಾಮ್ ಭಟ್

07/06/2025 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BBMP ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ರೇ ‘FIR’ ದಾಖಲು: ತುಷಾರ್ ಗಿರಿ ನಾಥ್ ಎಚ್ಚರಿಕೆ
KARNATAKA

BBMP ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ರೇ ‘FIR’ ದಾಖಲು: ತುಷಾರ್ ಗಿರಿ ನಾಥ್ ಎಚ್ಚರಿಕೆ

By kannadanewsnow0929/07/2024 4:38 PM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ರವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್/ಬ್ಯಾನರ್ ಗಳನ್ನು ಪಾಲಿಕೆಯಿಂದ ತೆರವುಗೊಳಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್.ಐ.ಆರ್ ದಾಖಲಿಸಲಾಗುತ್ತಿದೆ. ಆದರೂ ಸಾರ್ವಜನಿಕ ಸ್ಥಳ, ರಸ್ತೆ ಬದಿ ಫ್ಲೆಕ್ಸ್ ಅಳವಡಿಸುವುದು ಮಾತ್ರ ನಿಯಂತ್ರಣವಾಗುತ್ತಿಲ್ಲ. ಆದ್ದರಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಜಾಹೀರಾತು ಅಳವಡಿಕೆಗೆ ನಿಯಂತ್ರಣ ತರಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ವಲಯವಾರು ಬರುವ ಫ್ರಿಂಟಿಂಗ್ ಯುನಿಟ್ಸ್ ಗಳ ಮೇಲೆ ಆಗಿಂದಾಗ್ಗೆ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸದಂತೆ ಎಚ್ಚರಿಕೆ ನೀಡಬೇಕು. ಜೊತೆಗೆ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿದಂತೆ ನಾಗರೀಕರಲ್ಲಿ ಹೆಚ್ಚು-ಹೆಚ್ಚು ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.

ರಾತ್ರಿ ವೇಳೆ ಪ್ರಹರಿ ವಾಹನಗಳ ಮೂಲಕ ಗಸ್ತು ತಿರುಗಬೇಕು:

ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ರಾತ್ರಿ ವೇಳೆ ಹೆಚ್ಚಾಗಿ ಅಳವಡಿಸುತ್ತಾರೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಒಂದು ಪ್ರಹರಿ ವಾಹನವನ್ನು ನಿಯೋಜಿಸಿ ಪ್ರಮುಖ ರಸ್ತೆಗಳಲ್ಲಿ ಗಸ್ತು ತಿರುಗುವ ಮೂಲಕ ಪರಿಶೀಲನೆ ಹಾಗೂ ಅನಧಿಕೃತ ಫ್ಲೆಕ್ಸ್/ಬ್ಯಾನರ್ ಅಳವಡಿಸುವುದರ ಮೇಲೆ ನಿಗಾವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಸ್ತೆ ಗುಂಡಿ ಗಮನ ತಂತ್ರಾಂಶದಲ್ಲಿ‌ ಬರುವ ದೂರುಗಳಿಗೆ ಕೂಡಲೆ ಸ್ಪಂದಿಸಿ:

ನಗರದಲ್ಲಿ ಕಾಲಮಿತಿಯೊಳಗಾಗಿ ಹಾಗೂ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ “ರಸ್ತೆ ಗುಂಡಿ ಗಮನ” ಮೊಬೈಲ್ ಅಫ್ಲಿಕೇಷನ್ ಅನ್ನು ಅನಾವರಣಗೊಳಿಸಿದ್ದು, ಅದರ ಬಗ್ಗೆ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ತಂತ್ರಾಂಶದ ಮೂಲಕ ನಾಗರೀಕರಿಂದ ಬರುವ ದೂರಗಳನ್ನು ತ್ವರಿತವಾಗಿ ಮುಚ್ಚಬೇಕು. ಜೊತೆಗೆ ನಗರದ ಪ್ರಮುಖ ರಸ್ತೆಗಳಲ್ಲಿರುವ ಗುಂಡಿಗಳನ್ನು ಆದ್ಯತೆ ಮೇರೆಗೆ ಮುಚ್ಚಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು,

ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಿ:

ನಗರದಲ್ಲಿ ಸರಾಸರಿ 200 ಡೆಂಘೀ ಪ್ರಕರಣಗಳು ಕಂಡುಬರುತ್ತಿವೆ. ಪ್ರತಿ ವಾರ್ಡ್ನಲ್ಲಿ ಔಷಧಿ ಸಿಂಪಡಣೆಗಾಗಿ ಸ್ಪ್ರೇಯರ್ ಹಾಗೂ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದ್ದು, ಈ ಪೈಕಿ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಲು ಸೂಚಿಸಲಾಯಿತು.

ಪಾಲಿಕೆ ವ್ಯಾಪ್ತಿಯಲ್ಲಿ ಸದ್ಯ 30 ಆಕ್ಟೀವ್ ಹಾಟ್ ಸ್ಪಾಟ್ ಗಳಿದ್ದು, ಕೊಳಗೇರಿ ಹಾಗೂ ಬಡ ವರ್ಗದ ಪ್ರದೇಶದಲ್ಲಿ ನೀಮ್ ಆಯಿಲ್ ಹಾಗು ಡೀಟ್ ಕ್ರೀಮ್ ಅನ್ನು ಹಂಚಿಕೆ ಮಾಡಲಾಗುತ್ತಿದೆ. ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಸುವ ಸಲುವಾಗಿ ಸೊಳ್ಳೆ ಉತ್ಪತ್ತಿ ತಾಣಗಳಲ್ಲಿ ಹೆಚ್ಚಾಗಿ ಫಾಗಿಂಗ್, ಔಷಧಿ ಸಿಂಪಡಣೆ ಮಾಡಬೇಕು. ಜೊತೆಗೆ ಹಾಟ್‌ಸ್ಪಾಟ್ ಸ್ಥಳಗಳಲ್ಲಿ ಡೆಂಘೀ ನಿಯಂತ್ರಣಕ್ಕೆ ಬೇಕಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಶಿವಾನಂದ್ ಕಲ್ಕೆರೆ, ವಲಯ ಆಯುಕ್ತರಾದ ಡಾ. ಆರ್.ಎಲ್ ದೀಪಕ್, ಶಿವಾನಂದ್ ಕಪಾಶಿ, ರಮೇಶ್, ಕರೀಗೌಡ, ಪ್ರೀತಿ ಗೆಹ್ಲೋಟ್, ಸ್ನೇಹಲ್, ವಿನೋತ್ ಪ್ರಿಯಾ, ರಮ್ಯಾ, ಪ್ರಧಾನ ಅಭಿಯಂತರರಾದ ಡಾ. ಪ್ರಹ್ಲಾದ್, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

BREAKING: ಇಂದು ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ಗೆ ಸಿಗದ ರಿಲೀಫ್: ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್ | Arvind Kejriwal

BREAKING : ‘ಕೊರೊನಿಲ್’ ಕೋವಿಡ್ -19ಗೆ “ಚಿಕಿತ್ಸೆ” ಹೇಳಿಕೆ ಹಿಂತೆಗೆದುಕೊಳ್ಳುವಂತೆ ‘ಬಾಬಾ ರಾಮ್ದೇವ್’ಗೆ ಹೈಕೋರ್ಟ್ ಸೂಚನೆ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM1 Min Read

KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ ಅಂಗೀಕಾರ: ಅಧ್ಯಕ್ಷ ರಘುರಾಮ್ ಭಟ್

07/06/2025 8:58 PM1 Min Read

ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

07/06/2025 8:48 PM2 Mins Read
Recent News

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

ಟೀಂ ಇಂಡಿಯಾ ವೈಟ್-ಬಾಲ್ ನಾಯಕತ್ವದ ರೇಸ್‌’ನಲ್ಲಿ ‘ಶ್ರೇಯಸ್ ಅಯ್ಯರ್’ ; ವರದಿ

07/06/2025 9:01 PM

KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ ಅಂಗೀಕಾರ: ಅಧ್ಯಕ್ಷ ರಘುರಾಮ್ ಭಟ್

07/06/2025 8:58 PM

ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

07/06/2025 8:48 PM
State News
KARNATAKA

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

By kannadanewsnow0907/06/2025 9:01 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಮುಂದುವರೆದಿದೆ. ಇಂದು ಹೊಸದಾಗಿ 57 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ…

KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ ಅಂಗೀಕಾರ: ಅಧ್ಯಕ್ಷ ರಘುರಾಮ್ ಭಟ್

07/06/2025 8:58 PM

ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

07/06/2025 8:48 PM

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.