ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಂಗಳೂರು ಮೂಲದ ಮಹಿಳಾ ಟೆಕ್ಕಿ ಶರ್ಮಿಳ (34) ಕೊಲೆ ಆಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕೇರಳ ಮೂಲದ ಕರ್ನಲ್ ಕುರೈ ಎಂಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಹತ್ಯೆಯಾಗಿದೆ. ಕೊಲೆಯಾದ ಶರ್ಮಿಳ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ರಾಮಮೂರ್ತಿ ನಗರದ ಸುಬ್ರಮಣ್ಯ ಲೇಔಟ್ ನಲ್ಲಿ ಶರ್ಮಿಳಾ ವಾಸವಿದ್ದರು . ಕೇರಳ ಮೂಲದ ಆರೋಪಿ ಕರ್ನಲ್ ಕುರೈನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶರ್ಮಿಳಾ ವಾಸವಿದ್ದ ಪಕ್ಕದ ಮನೆಯಲ್ಲಿಯೇ ಕರ್ನಲ್ ವಾಸವಿದ್ದ ಶರ್ಮಿಳಾಳನ್ನು ಆರೋಪಿ ಕರ್ನಲ್ ಕುರೈ ಪ್ರೀತಿಸುತ್ತಿದ್ದ. ಅಲ್ಲದೆ ಶರ್ಮಿಳ ಜೊತೆಗೆ ದಿನಾಲು ಮಾತುಕತೆ ನಡೆಸುತ್ತಿದ್ದ. ತಾನು ಪ್ರೀತಿಸುತ್ತಿದ್ದ ವಿಚಾರ ಆರೋಪಿ ಶರ್ಮಿಳಗೆ ಹೇಳದೆ ಇದ್ದ.
ಜನವರಿ 3ರಂದು ಬಾಲ್ಕನಿಯ ಮೂಲಕ ಕರ್ನಲ್ ಮನೆ ಒಳಗೆ ನುಗ್ಗಿದ್ದಾನೆ ಸಡನ್ ಆಗಿ ಹಿಂಬದಿಯಿಂದ ಶರ್ಮಿಳಾಳನ್ನು ಕರ್ನಲ್ ಅಪ್ಪಿಕೊಂಡಿದ್ದ. ಬಿಡಿಸಿಕೊಳ್ಳಲು ಯತ್ನಿಸಿದಾಗ ಕುತ್ತಿಗೆ ಭಾಗಕ್ಕೆ ಕರ್ನಲ್ ಹೊಡೆದಿದ್ದ. ಈ ವೇಳೆ ಶರ್ಮಿಳಾ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ, ಬಳಿಕ ಆಕೆಯನ್ನು ಉಸಿರು ಕಟ್ಟಿಸಿ ಕರ್ನಲ್ ಕೊಲೆ ಮಾಡಿದ್ದಾನೆ. ಸಾಕ್ಷಿ ನಾಶ ಮಾಡಲು ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ. ಅನುಮಾನ ಸಾವು ಎಂದು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿಯನ್ನು ಪೊಲೀಸರು ಮಾಡಿದ್ದಾರೆ. ಬೆಂಗಳೂರಿನಲ್ಲಿ ಆರೋಪಿ ಕರ್ನಲ್ ದ್ವಿತೀಯ ಪಿಯುಸಿ ಓದುತ್ತಿದ್ದ ಎಂದು ತಿಳಿದು ಬಂದಿದೆ.








