ಮಂಡ್ಯ : ಅರ್ಚಕ ಅನುಮಾನಾಸ್ಪದವಾಗಿ ಸಾವನ್ನಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನ್ನ ಕಾಮದಾಟಕ್ಕೆ ಅಡ್ಡಿಯಾಗಬಾರದೆಂದು ಪ್ರಿಯಕರನಿಂದಲೇ ಪತಿಯನ್ನು ಕೊಲೆ ಮಾಡಿಸಿರುವ ಘಟನೆ ಮಂಡ್ಯದ ಮರಳಗಾಲ ಬಳಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಮಾರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ ಕೊಲೆಯಾದವರು. ಸಿದ್ದಲಿಂಗಪ್ಪನ ಪತ್ನಿ ಶಾಲಿನಿ (32), ಮರಳಗಾಲ ಗ್ರಾಮದ ಹರೀಶ (33), ಸಂತೋಷ್ ಕುಮಾರ್ (29) ಮತ್ತು ಗಣೇಶ ಬಿ.ಆರ್. ಬಿನ್ ಲೇಟ್ ರಾಮಸಿದ್ದು (29) ಕೊಲೆ ಪ್ರಕರಣದ ಬಂಧಿತ ಆರೋಪಿಗಳಾಗಿದ್ದಾರೆ.
ಮಾ.6ರಂದು ಶ್ರೀರಂಗಪಟ್ಟಣ ತಾಲೂಕಿನ ಮಾರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ ಅವರು ಕೆ.ಶೆಟ್ಟಹಳ್ಳಿ ಗಣಪತಿ ದೇವಸ್ಥಾನಕ್ಕೆ ಪೂಜೆಗೆ ಹೋಗಿ ರಾತ್ರಿ ಮನೆಗೆ ಬಾರದೇ ಇದ್ದಾಗ ಮತ್ತು ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಸಂಬಂಧಿಕರು ಹುಡುಕಾಟ ನಡೆಸಿದ್ದಾರೆ. ರಾತ್ರಿ ಸಿಡಿಎಸ್ ಕಾಲುವೆಯ ತೂಬಿನ ಹತ್ತಿರದ ರಸ್ತೆಯಲ್ಲಿ ಆರ್ಚಕ ಸಿದ್ದಲಿಂಗಪ್ಪನ ಚಪ್ಪಲಿ ಮತ್ತು ಪಕ್ಕದ ಹುಲ್ಲಿನ ಮೇಲೆ ರಕ್ತ ಚೆಲ್ಲಿದ್ದು, ಅಕ್ಕಪಕ್ಕದಲ್ಲಿ ಅರ್ಚಕ ಧರಿಸುತ್ತಿದ್ದ ರುದ್ರಾಕ್ಷಿಮಣಿ ಸ್ಪಟಿಕಮಣಿ ಸರ, ಅದರಲ್ಲಿದ್ದ ಡಾಲರ್‌ಗಳು ಬಿದ್ದಿದ್ದವು.
ಶಾಲಿನಿ ಹಾಗೂ ಅದೇ ಗ್ರಾಮದ ಹರೀಶ್ ಅಕ್ರಮ ಸಂಬಂಧ ಹೊಂದಿದ್ದರು. ಒಂದೂವರೆ ವರ್ಷದ ಹಿಂದೆ ಸಿದ್ದಲಿಂಗಪ್ಪನ ಕೈಗೆ ಇಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಇದರಿಂದ ಶಾಲಿನಿಗೆ ಹಲವು ಬಾರಿ ಬುದ್ಧಿವಾದ ಹೇಳಿ, ಸರಿದಾರಿಗೆ ತರಲು ಯತ್ನಿಸಿದ್ದ.ಇದರ ನಡುವೆ ತನ್ನ ಗಂಡನನ್ನೇ ಮುಗಿಸಲು ಶಾಲಿನಿ ಸ್ಕೆಚ್ ಹಾಕಿದ್ದಳು. ಪೂಜೆಗೆಂದು ಪತಿ ಮರಳಗಾಲಕ್ಕೆ ತೆರಳಿದ್ದರು. ಈ ವೇಳೆ ಶಾಲಿನಿ ತನ್ನ ಪ್ರಿಯಕರನಿಗೆ ಮೆಸೇಜ್ ಮಾಡಿ ತಿಳಿಸಿದ್ದಳು.
ಆಗ ನಾಲೆ ಏರಿ ಬೈಕ್‌ನಲ್ಲಿ ಬರ್ತಿದ್ದ ಸಿದ್ದಲಿಂಗಪ್ಪನನ್ನು ಪ್ರಿಯಕರ ಹರೀಶ್ ಮತ್ತು ಇಬ್ಬರು ಸ್ನೇಹಿತರು ಅಡ್ಡಗಟ್ಟಿದ್ದರು. ತಲೆಗೆ ದೊಣ್ಣೆಯಿಂದ ಹಲ್ಲೆ ಮಾಡಿ, ಹತ್ಯೆಗೈದು ಬಳಿಕ ನಾಲೆಗೆ ಮೃತದೇಹವನ್ನು ಬೀಸಾಡಿ ಅಪಘಾತದಂತೆ ಬಿಂಬಿಸಿದ್ದರು.ಪೊಲೀಸರು ಪರಿಶೀಲನೆ ನಡೆಸಿದಾಗ, ಚಪ್ಪಲಿ ಸಿಕ್ಕ ಸ್ಥಳದಲ್ಲಿ ರಕ್ತದ ಕಲೆ ಪತ್ತೆಯಾಗಿತ್ತು. ಅನುಮಾನಗೊಂಡ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಸಾವಿನ ರಹಸ್ಯ ಬಯಲಾಗಿದೆ.








