ಬೆಂಗಳೂರು : ದೈವದ ಕುರಿತು ಪೋಸ್ಟ್ ಮಾಡಿದ ಹಿನ್ನೆಲೆ ನಟ ಕಿಶೋರ್ ಟ್ವಿಟರ್ ಖಾತೆಯನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಹೇಳಲಾಗಿತ್ತು, ಆದರೆ ಇದಕ್ಕೆ ಅಸಲಿ ಕಾರಣವೇ ಬೇರೆಯಿದೆ.

ಈ ಬಗ್ಗೆ ಕಿಶೋರ್ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನನ್ನ ಟ್ವಿಟರ್ ಖಾತೆ ಯಾವ ಪೋಸ್ಟ್ ನಿಂದಲೂ ಸಸ್ಪೆಂಡ್ ಆಗಿಲ್ಲ, ಡಿ.20 2022 ರಂದು ಹ್ಯಾಕ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ಸರಿಯಾದ ಕ್ರಮ ಕೈಗೊಳ್ಳುವುದಾಗಿ ಟ್ವಿಟರ್ ಭರವಸೆ ನೀಡಿದೆ ಎಂದು ಹೇಳಿದ್ದಾರೆ. ಟ್ವಿಟರ್ ಖಾತೆ ಮೇಲೆ ಹ್ಯಾಕರ್ಗಳ ಕಣ್ಣು ಬಿದ್ದಿದ್ದು, ಅಕೌಂಟ್ ಸಸ್ಪೆಂಡ್ ಆಗಲು ಇದು ಮುಖ್ಯ ಕಾರಣ ಎಂದು ಅವರು ತಿಳಿಸಿದ್ದಾರೆ.

‘ಕಾಂತಾರ’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಚಿತ್ರ. ಈ ಸಿನಿಮಾದಲ್ಲಿ ಫಾರೆಸ್ಟ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ಕಿಶೋರ್ ಇದೀಗ ಸುದ್ದಿಯಲ್ಲಿದ್ದಾರೆ. ಇನ್ನೂ, ತಮಗೆ ಅನಿಸಿದ್ದು ತೋಚಿದ್ದನ್ನು ಕಿಶೋರ್ ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಪರ ವಿರೋಧ ಕಮೆಂಟ್ ಗಳು ಬಂದಿದೆ.

ಏನಿದು ಕಿಶೋರ್ ಟ್ವೀಟ್..?
ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?? ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು.ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ.ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ?ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ.

ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ.ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ.ಅದರ ಹೆಸರಲ್ಲಿ ದ್ವೇಷವೂ ಬೇಡ ಎಂದು ಬರೆದುಕೊಂಡಿದ್ದಾರೆ.

ಕೋವಿಡ್‌ ಹಿನ್ನಲೆ : ಭಾರತದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ, ಇಲ್ಲಿದೆ ವೈರಲ್‌ ಸುದ್ದಿಯ ಅಸಲಿತ್ತು

ಬಳ್ಳಾರಿಯಲ್ಲಿ 400 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

Share.
Exit mobile version