ಬೆಂಗಳೂರು: ರಾಜ್ಯ ಸರ್ಕಾರದಿಂದ ಎರಡು ಅಕಾಡೆಮಿಗಳಿಗೆ, ಒಂದು ಪ್ರಾಧಿಕಾರಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರ ಸ್ಥಾನಕ್ಕೆ ಡಾ.ಕೃಪಾ ಫಡಕೆ, ಮೈಸೂರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ವಿಜಯಲಕ್ಷ್ಮಿ ಕೌಟಗಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಮಾಲೂರು ವಿಜಿ ನಾಮನಿರ್ದೇಶನವನ್ನು ರದ್ದುಗೊಳಿಸಿದೆ.
ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ ಅಧಿಸೂಚನೆ ಹೊರಡಿಸಿದ್ದಾರೆ. 2024ರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರ ಸ್ಥಾನಕ್ಕೆ ಡಾ.ಕೃಪಾ ಫಡಕೆ, ಮೈಸೂರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ವಿಜಯಲಕ್ಷ್ಮಿ ಕೌಟಗಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಮಾಲೂರು ವಿಜಿ ಇವರ ನಾಮ ನಿರ್ದೇಶನಗೊಳಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಿದ್ದಾರೆ.
ಇನ್ನೂ ಈ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷರನ್ನಾಗಿ ಶಿವಮೊಗ್ಗದ ಶುಭಾ ಧನಂಜಯ ನೇಮಿಸಿದ್ದಾರೆ. ಅಲ್ಲದೇ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯರನ್ನಾಗಿ ಬಿಎಲ್ ರಾಜು ನೇಮಕ ಮಾಡಿದ್ದರೇ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರನ್ನಾಗಿ ಜಿವಿ ರವೀಂದ್ರನಾಥ( ರವೀಂದ್ರನಾಥ ಸಿರಿವರ) ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.
ಸಿಎಂ ಸಭೆ ಬೆನ್ನಲ್ಲೇ, ‘ಶಾಸಕ ಬೇಳೂರು ಗೋಪಾಲಕೃಷ್ಣ’ ಅಲರ್ಟ್: ‘ಸಾಗರ ತಾಲೂಕು’ ಆಡಳಿತಕ್ಕೆ ಚುರುಕು
ನಟ ದರ್ಶನ್ ಪ್ರಕರಣದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್