ಹುಬ್ಬಳ್ಳಿ: ಜಿಲ್ಲೆಯಲ್ಲಿ ಹುಬ್ಬಳ್ಳಿ ಗ್ರಾಮಾಂತರ ಠಆಣೆಯ ಎದುರಿನ ಒಂಟಿ ಮನೆಯಲ್ಲೇ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ತೋಟದ ಪಕ್ಕದಲ್ಲೇ ಅಕ್ರಮವಾಗಿ ನಕಲಿ ಮದ್ಯವನ್ನು ತಯಾರಿಸುತ್ತಿದ್ದದ್ದು ಪತ್ತೆ ಹಚ್ಚಲಾಗಿದೆ. ಈ ಸಂಬಂಧ ಇಬ್ಬರು ಆರೋಪಿಗಳ್ನು ಬಂಧಿಸಲಾಗಿದೆ.
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಹುಬ್ಬಳ್ಳಿ ಗ್ರಾಮಾಂತರ ಠಾಣೆಯ ಎದುರಿನ ಒಂಟಿ ಮನೆಯಲ್ಲೇ ನಕಲಿ ಮದ್ಯ ತಯಾರಿಸುತ್ತಿದ್ದ ಬಗ್ಗೆ ಅಬಕಾರಿ ಇಲಾಖೆಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಅಬಕಾರಿ ಎಸ್ ಪಿ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ಮದ್ಯವನ್ನು, ಅದಕ್ಕೆ ಬಳಕೆ ಮಾಡಲಾಗುತ್ತಿದ್ದಂತ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ನಕಲಿ ಮದ್ಯ ತಯಾರಿಕೆ ಪ್ರಕರಣದಲ್ಲಿ ಅಮೃತ್ ಹಾಗೂ ಸಂದೀಪ್ ಎಂಬುವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳ ಬಳಿಯಲ್ಲಿ ಸ್ಥಳದಲ್ಲಿದ್ದಂತ ಡಿಎಸ್ ಪಿ ಬ್ಲಾಕ್, ಇಂಪೀರಿಯರ್ ಬ್ಲೂ ಸೇರಿದಂತೆ ಇತರೆ ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಪ್ರಗತಿ ಪಥ ಯೋಜನೆಯಡಿ 7110 ಕಿ.ಮೀ ಅಭಿವೃದ್ಧಿ: ಸಚಿವ ಪ್ರಿಯಾಂಕ್ ಖರ್ಗೆ
‘KSRTC ಕಚೇರಿ’ಗೆ ಭೇಟಿ ನೀಡಿದ ‘ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ’ಯ ಅಧ್ಯಕ್ಷ, MD, ಅಧಿಕಾರಿಗಳ ತಂಡ