ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿಯಲ್ಲಿ ಎರಡು ಕಾರುಗಳು ಸ್ಪೋಟಗೊಂಡಿವೆ. ಸ್ಪೋಟದಿಂದಾಗಿ ಎರಡು ಕಾರುಗಳು ಹೊತ್ತಿ ಉರಿದಿದ್ದಾವೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಹಲಿಯ ಕೆಂಪುಕೋಟೆ ಬಳಿ 2 ಕಾರುಗಳು ಸ್ಪೋಟಗೊಂಡಿದ್ದಾವೆ. ಹೊಗೆ ಕಾಣಿಸಿಕೊಂಡು ಸ್ಪೋಟವಾಗಿರುವ ಕಾರುಗಳು ಇವಾಗಿವೆ ಎನ್ನಲಾಗುತ್ತಿದೆ. ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ನಂ.1ರ ಬಳಿಯಲ್ಲಿ ಈ ಸ್ಪೋಟ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ತಲುಪಿದ್ದಾರೆ.
ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಬಳಿಯಲ್ಲಿ ಈ ಸ್ಪೋಟ ಸಂಭವಿಸಿದೆ. ಗೇಟ್ ನಂಬರ್ 1ರ ಬಳಇ ಮೊದಲು ಒಂದು ಕಾರು ಸ್ಪೋಟಗೊಂಡಿದೆ. ಆ ಬಳಿಕ ಹತ್ತಿರದಲ್ಲಿದ್ದ ಮತ್ತೆರಡು ಕಾರು ಬೆಂಕಿಗೆ ಆಹುತಿಯಾಗಿವೆ.
ಕಾರು ಬಾಂಬ್ ಸ್ಪೋಟಿಸಲಾಗಿದೆಯೋ ಅಥವಾ ಬೇರೆ ಏನಾದರೂ ಸ್ಪೋಟಿಸಲಾಗಿದೆಯೋ ಎನ್ನುವ ಬಗ್ಗೆ ಪೊಲೀಸರ ತನಿಖೆಯ ಬಳಿಕ ಖಚಿತ ಮಾಹಿತಿ ಲಭ್ಯವಾಗಬೇಕಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ ಸೇರಿದಂತೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ದೆಹಲಿ ಅಗ್ನಿಶಾಮಕ ಇಲಾಖೆಯ ಪ್ರಕಾರ, ನಿಲ್ಲಿಸಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ಕರೆ ಬಂದಿದ್ದು, ನಂತರ ಹತ್ತಿರದ ಮೂರರಿಂದ ನಾಲ್ಕು ವಾಹನಗಳು ಬೆಂಕಿಗೆ ಆಹುತಿಯಾಗಿ ಹಾನಿಯಾಗಿವೆ. ಬೆಂಕಿಯನ್ನು ನಿಯಂತ್ರಿಸಲು ಹಲವಾರು ಅಗ್ನಿಶಾಮಕ ದಳದ ವಾಹನಗಳನ್ನು ತಕ್ಷಣವೇ ಸ್ಥಳಕ್ಕೆ ರವಾನಿಸಲಾಗಿದೆ. ಅಧಿಕಾರಿಗಳು ಸಿಎನ್‌ಜಿ ಸಿಲಿಂಡರ್ ಸ್ಫೋಟವನ್ನು ಶಂಕಿಸಿದ್ದಾರೆ, ಆದರೂ ನಿಖರವಾದ ಕಾರಣವನ್ನು ಇನ್ನೂ ದೃಢಪಡಿಸಲಾಗಿಲ್ಲ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಮತ್ತು ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.
BIG NEWS : `ಜಾತಿ ಗಣತಿ’ ಸಮೀಕ್ಷೆದಾರರು, ಮೇಲ್ವಿಚಾರಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಗೌರವಧನ’ ಬಿಡುಗಡೆ








