ಬೆಂಗಳೂರು: ಬೆಂಗಳೂರಿನಲ್ಲಿ ಮಲತಂದೆಯಿಂದಲೇ ಇಬ್ಬರು ಹೆಣ್ಣು ಮಕ್ಕಳ ಹತ್ಯೆ ಮಾಡಿದ್ದು, ಕೊಲೆ ಆರೋಪಿ ಪರಾರಿಯಾಗಿದ್ದು ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಅಮೃತಹಳ್ಳಿ ಪೊಲೀಸರು ಹುಡುಕಾಟ ಶುರುಮಾಡಿದ್ದಾರೆ.
ದಾಸರಹಳ್ಳಿಯ ಕಾವೇರಿ ಬಡಾವಣೆಯಲ್ಲಿ ನೆಲೆಸಿರುವ ಉತ್ತರ ಭಾರತ ಮೂಲದ ಮಹಿಳೆಯ ಮನೆಯಲ್ಲಿ ಘಟನೆ ನಡೆದಿದ್ದು, ಮಲತಂದೆ ಸುಮಿತ್ . ಸೃಷ್ಠಿ (14) ಮತ್ತು ಸೋನಿಯಾ(16) ಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು, ಈಶಾನ್ಯ ವಿಭಾಗ ಡಿಸಿಪಿ ಸಜೀತ್, ಡಾಗ್ ಸ್ಕ್ವಾಡ್, ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಹಾಗೂ ಸೊಕೊ ಟೀಂ ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.