ಬೆಂಗಳೂರು: ನಗರದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದೆ. ಇಂದು ಡೆಂಗ್ಯೂ ಜ್ವರದಿಂದ ಇಬ್ಬರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಬೆಂಗಳೂರಿನ ಬಿಬಿಎಂಪಿ ಪೂರ್ವ ವಲಯದಲ್ಲಿ ಡೆಂಗ್ಯೂ ಜ್ವರದಿಂದ 80 ವರ್ಷದ ವೃದ್ಧೆ ಹಾಗೂ 27 ವರ್ಷದ ಯುವಕ ಬಲಿಯಾಗಿರುವುದಾಗಿ ತಿಳಿದು ಬಂದಿದೆ.

ಇಬ್ಬರು ಡೆಂಗ್ಯೂ ನಿಂದ ಸಾವನ್ನಪ್ಪಿದ್ದಾರೋ ಅಥವಾ ಬೇರೆ ಕಾರಣದಿಂದಲೋ ಎಂಬುದನ್ನು ನಾಳೆ ಡೆತ್ ಆಡಿತ್ ಮೂಲಕ ಬಿಬಿಎಂಪಿ ಅಧಿಕಾರಿಗಳು ಸ್ಪಷ್ಟ ಪಡಿಸಲಿದ್ದಾರೆ.

ಸಮಗ್ರ ಮೈಕ್ರೋ ಪ್ಲಾನ್ ಮೂಲಕ ಡೆಂಘೀ ನಿಯಂತ್ರಿಸಿ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ನಗರದಲ್ಲಿ ಸಮಗ್ರ ಮೈಕ್ರೋ ಪ್ಲಾನ್ ಮಾಡಿಕೊಂಡು ಅದರ ಪ್ರಕಾರ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಿಸುವ ನಿಟ್ಟಿನಲ್ಲಿ ವಲಯವಾರು “ಡ್ರೈ ಡೇ” ನಡೆಸಲಾಗುತ್ತಿದ್ದು, ಅದರ ಅಂಗವಾಗಿ ಪೂರ್ವ ವಲಯ ಸಿವಿ ರಾಮನ್ ನಗರದ ಜಿಎಂ ಪಾಳ್ಯ ಹಾಗೂ ನ್ಯೂ ತಿಪ್ಪಸಂದ್ರ ವ್ಯಾಪ್ತಿಯಲ್ಲಿ ಮನೆ-ಮನೆ ಭೇಟಿ ನೀಡಿ ನಾಗರೀಕರಲ್ಲಿ ಜಾಗೃತಿ ಮೂಡಿಸುತ್ತಿರುವ ಸ್ಥಳಕ್ಕೆರ ಭೇಟಿ ನೀಡಿ ಪರಿಶೀಲಿಸಲಾಯಿತು.

ಮನೆ-ಮನೆ ಭೇಟಿ ನೀಡಿ ಈಡೀಸ್, ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಘೀ ರೋಗ ಹರಡುತ್ತದೆ. ಆದ್ದರಿಂದ ನೀರಿನ ಸಂಪ್, ಡ್ರಮ್, ಕೊಳಾಯಿ ಬಳಿ, ಹೂವಿನ ಕುಂಡ ಸೇರಿದಂತೆ ಇನ್ನಿತರೆ ಕಡೆ ಪರಿಶೀಲಿಸಿ ವಾರಕ್ಕೊಮ್ಮೆ ಎಲ್ಲಾ ಕಡೆ ನೀರನ್ನು ಹೊರ ಹಾಕಿ ಒಣಗಿಸಿ ಮತ್ತೆ ಶುದ್ಧ ನೀರು ಸಂಗ್ರಹಿಸಕೊಳ್ಳುವುದು. ವಾರಕ್ಕಿಂತ ಹೆಚ್ಚು ದಿನಗಳು ಒಂದೇ ನೀರು ಸಂಗ್ರಹವಾಗಿದ್ದರೆ ಲಾರ್ವಾ ಉತ್ಪತ್ತಿಯಾಗಿ ಸೊಳ್ಳೆಗಳು ಹೆಚ್ಚಾಗುತ್ತವೆ. ಈ ನಿಟ್ಟಿನಲ್ಲಿ ವಾರಕ್ಕೊಮ್ಮೆ ತಪ್ಪದೆ ಹಳೆ ನೀರು ತೆಗೆದು ಹೊಸ ನೀರು ತುಂಬಿಸಿಕೊಳ್ಳಲು ನಾಗರೀಕರಲ್ಲಿ ಮನವಿ ಮಾಡಿದರು.

ಇನ್ನು ಡೆಂಘೀ ಹರಡುವ ಬಗ್ಗೆ ಆಶಾ ಕಾರ್ಯಕರ್ತೆಯರು ಮನೆ-ಮನೆ ಭೇಟಿ ನೀಡುವ ವೇಳೆ ಬಿತ್ತಿಪತ್ರಗಳನ್ನು ವಿತರಿಸಿದರೆ ಲಾರ್ವಾ ಉತ್ಪತ್ತಿಯಾಗುವುದನ್ನು ತಡೆಗಟ್ಟಲು ಸಹಕಾರಿಯಾಗಲಿದೆ. ಜೊತೆ ಲಾರ್ವಾ ಉತ್ಪತ್ತಿ ತಾಣಗಳನ್ನು ಗುರಿಸಿರುವ ಕಡೆ ಔಷಧಿ ಸಿಂಪಡಣೆ ಮಾಡಿ ಸೊಳ್ಳೆಗಳ ಉತ್ಪತ್ತಿ ತಾಣವನ್ನು ನಿಯಂತ್ರಿಸಬೇಕೆಂದು ಹೇಳಿದರು.

ಫ್ರಿಸ್ಮ್-ಹೆಚ್(PRISM-H) ತಂತ್ರಾಂಶದಲ್ಲಿ ಮಾಹಿತಿ ಹಾಕಿ:

ಡೆಂಘೀ ತಡೆಗಟ್ಟುವ ಸಲುವಾಗಿ ವಲಯವಾರು ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿರುವ ಬಗ್ಗೆ ಸಮಗ್ರ ವರದಿಯನ್ನು ಫ್ರಿಸ್ಮ್-ಹೆಚ್ ತಂತ್ರಾಂಶದಲ್ಲಿ ಆಯಾ ದಿನವೇ ನಮೂದಿಸಬೇಕೆಂದು ಸೂಚಿಸಿದರು.

ಆಯಾ ವಲಯಗಳಲ್ಲಿ ವಲಯ ಆಯುಕ್ತರು ನೇತೃತ್ವದಲ್ಲಿ ಡ್ರೈ ಡೇ ಕಾರ್ಯಾಚರಣೆ:

ಪಾಲಿಕೆ ವ್ಯಾಪ್ತಿಯ ಎಂಟೂ ವಲಯಗಳಲ್ಲಿ ವಲಯ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಡ್ರೈ ಡೇ ಕಾರ್ಯಾಚರಣೆಯ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಕೂಡಾ ಮಹಾಲಕ್ಷ್ಮೀ ಲೇಔಟ್ ವ್ಯಾಪ್ತಿಯಲ್ಲಿ ಡ್ರೈ ಡೇ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಯಲಹಂಕ ವಲಯ ವಲಯ ಆಯುಕ್ತರು ಶಾಲೆಗೆ ಭೇಟಿ ನೀಡಿ, ನಿಮ್ಮ ಮನೆಯಲ್ಲಿ ವಾರಕ್ಕೊಮ್ಮೆ ನೀರು ಸ್ವಚ್ಛಮಾಡುವ, ಮನೆಗಳ ಸುತ್ತಲು ನೀರು ನಿಲ್ಲದಂತೆ ನೋಡಿಕೊಳ್ಳುವ, ಅಕ್ಕ-ಪಕ್ಕದ ಮನೆಯವರಿಗೆ ಡೆಂಘೀ ಹರಡುವಿಕೆಯ ಬಗ್ಗೆ ತಿಳುವಳಿಕೆ ಮೂಡಿಸಲು ವಿಧ್ಯಾರ್ಥಿಗಳಿಗೆ ತಿಳಿಸಿದರು.

ಧ್ವನಿವರ್ಧಕಗಳ ಮೂಲಕ ಜಾಗೃತಿ:

ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಿರುವ ಪ್ರದೇಶದಲ್ಲಿ ಆಟೋಗಳ ಮೂಲಕ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಡೆಂಘೀ ನಿಯಂತ್ರಿಸುವ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಮುಖ್ಯ ಆರೋಗ್ಯಾಧಿಕಾದಿಯಾದ ಡಾ. ಸೈಯದ್ ಸಿರಾಜುದ್ದೀನ್ ಮದನಿ, ವಲಯ ಆರೋಗ್ಯಾಧಿಕಾರಿಯಾದ ಡಾ. ಭಾಗ್ಯಲಕ್ಷ್ಮೀ, ಆರೋಗ್ಯ ವೈದ್ಯಾಧಿಕಾರಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ರಾಜೀನಾಮೆ ನೀಡುವವರೆಗೂ ಹೋರಾಟ: ಆರ್‌.ಅಶೋಕ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ರಾಜೀನಾಮೆ ನೀಡುವವರೆಗೂ ಹೋರಾಟ: ಆರ್‌.ಅಶೋಕ್

Share.
Exit mobile version