ಬೆಳಗಾವಿ: ಜಿಲ್ಲೆಯ ಸುಳಗಾ ಗ್ರಾಮದಲ್ಲಿ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
BIGG NEWS: ಬೆಂಗಳೂರಿನ ಜನರೇ ಎಚ್ಚರ… ! ಇನ್ನೂ ಎರಡು ದಿನ ಭಾರಿ ಮಳೆ ; ಯೆಲ್ಲೋ ಅಲರ್ಟ್ ಘೋಷಣೆ
24 ವರ್ಷದ ವಿನಾಯಕ್ ಕಲ್ಕಾಂಬಕರ್ ಮತ್ತು 52 ವರ್ಷದ ಗೋಪಾಲ್ ಅಗಸಗೇಕರ್ ಮೃತ ದುರ್ದೈವಿಗಳು. ಮತ್ತೊಬ್ಬ ವ್ಯಕ್ತಿಗೆ ಗಂಭೀರವಾದ ಗಾಯವಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯ ಮೇಲೆ ಸ್ಟೀಲ್ಶೀಟ್ ಅಳವಡಿಸುವ ಸಂದರ್ಭದಲ್ಲಿ ಮನೆಯ ಮೇಲೆ ಹಾಯ್ದು ಹೋಗಿರುವ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿಗೆ ಗಂಭೀರವಾದ ಗಾಯಗಳಾಗಿದೆ. ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.