ಚಿಕ್ಕಮಗಳೂರು : ಕೆಎಸ್ ಆರ್ ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಕೃಷಿ ವ್ಯವಸಾಯೋತ್ಪನ್ನ ಕಚೇರಿ ಬಳಿ ನಡೆದಿದೆ.
ಮೃತರನ್ನು ಶ್ರೀಧರ್ (28) ದಯಾನಂದ (30) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
M.P ಕುಮಾರಸ್ವಾಮಿಗೆ ಟಿಕೆಟ್ ಕೊಡಬೇಡಿ : ಸಿ.ಟಿ ರವಿ ಮನೆ ಮುಂದೆ ‘BJP’ ಕಾರ್ಯಕರ್ತರ ಆಕ್ರೋಶ
ಮೂಡಿಗೆರೆ : ಮೂಡಿಗೆರೆಯಲ್ಲಿ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಸ್ವಪಕ್ಷೀಯ ಕಾರ್ಯಕರ್ತರೇ ತಿರುಗಿ ಬಿದ್ದಿದ್ದು, ಈ ಬಾರಿ ಟಿಕೆಟ್ ನೀಡಬೇಡಿ ಎಂದು ಪಟ್ಟುಹಿಡಿದು ಕುಳಿತಿದ್ದಾರೆ.
ಹೌದು, ಬಿಜೆಪಿ ಕಾರ್ಯಕರ್ತರು ಮೂಡಿಗೆರೆಯಿಂದ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಪಟ್ಟುಹಿಡಿದು ಕುಳಿತಿದ್ದಾರೆ. ಇತ್ತೀಚೆಗೆ ಯಡಿಯೂರಪ್ಪ, ಸಿಟಿ ರವಿ ಕಾರಿಗೆ ಮುತ್ತಿಗೆ ಹಾಕಿದ್ದ ಬಿಜೆಪಿ ಕಾರ್ಯಕರ್ತರು ಇದೀಗ ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿ.ಟಿ.ರವಿ ಮನೆಗೆ ಭೇಟಿ ನೀಡಿದ ಸಾವಿರಾರು ಕಾರ್ಯಕರ್ತರು, ಎಂ.ಪಿ.ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಆಗ್ರಹಿಸಿದರು.
ಮೂಡಿಗೆರೆಯಲ್ಲಿ ಕಳೆದ ವಾರ ತಮ್ಮ ಕಾರ್ಯಕರ್ತರು ರಸ್ತೆ ಮಧ್ಯೆಯೇ ಅಡ್ಡ ಹಾಕಿ ಪ್ರತಿಭಟನೆ ನಡೆಸಿದ ಕಾರಣ ಬಿ.ಎಸ್. ಯಡಿಯೂರಪ್ಪ ಕೋಪಗೊಂಡು ರೋಡ್ ಶೋ ರದ್ದು ಮಾಡಿ ಹೆಲಿಪ್ಯಾಡ್ನತ್ತ ತೆರಳಿದ್ದರು. ಇದೀಗ ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿ.ಟಿ.ರವಿ ಮನೆಗೆ ಭೇಟಿ ನೀಡಿದ ಸಾವಿರಾರು ಕಾರ್ಯಕರ್ತರು, ಎಂ.ಪಿ.ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಆಗ್ರಹಿಸಿದರು.
BREAKING NEWS : ವೃತ್ತಿಪರ ಫುಟ್ಬಾಲ್’ನಿಂದ ಸ್ಟಾರ್ ಆಟಗಾರ ‘ಮೆಸುಟ್ ಓಜಿಲ್’ ನಿವೃತ್ತಿ ಘೋಷಣೆ |Mesut Ozil
BREAKING NEWS : ವೃತ್ತಿಪರ ಫುಟ್ಬಾಲ್’ನಿಂದ ಸ್ಟಾರ್ ಆಟಗಾರ ‘ಮೆಸುಟ್ ಓಜಿಲ್’ ನಿವೃತ್ತಿ ಘೋಷಣೆ |Mesut Ozil