ಮುಂಬೈ : ಇಂದು ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದಲ್ಲಿ 10 ನಿಮಿಷಗಳಲ್ಲಿ 4.5, 3.6 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿವೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ರಿಕ್ಟರ್ ಮಾಪಕದಲ್ಲಿ 4.5 ರಷ್ಟಿರುವ ಮೊದಲ ಭೂಕಂಪನವು ಬೆಳಿಗ್ಗೆ 06.08 ರ ಸುಮಾರಿಗೆ ಸಂಭವಿಸಿದೆ. ಇದುಹಿಂಗೋಲಿ ನಗರದಲ್ಲಿ 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಬೆಳಿಗ್ಗೆ 6.19 ರ ಸುಮಾರಿಗೆ ಎರಡನೇ ಭೂಕಂಪನ ಸಂಭವಿಸಿದೆ. ಇದು ರಿಕ್ಟರ್ ಮಾಪಕದಲ್ಲಿ 3.6 ರಷ್ಟಿದ್ದು, 10 ಕಿ.ಮೀ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದಿಂದಾಗಿ ಯಾವುದೇ ಆಸ್ತಿಪಾಸ್ತಿ ಅಥವಾ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.