ಬೆಂಗಳೂರು: ಪೊಲೀಸ್ ವ್ಯವಸ್ಥೆಯನ್ನು ( Karnataka Police ) ಬಹಳ ಆಧುನಿಕರಣ ಮಾಡಿದ್ಧೇವೆ. ಫಾರೆನ್ಸಿಕ್ ಲ್ಯಾಬ್ ( Forensic Labs ) ಆಧುನಿಕರಣ ಮಾಡಲಾಗಿದೆ. ಅಪರಾಧ ಶೋಧನೆಯಲ್ಲಿ ಆಧುನಿಕ ಫಾರೆನ್ಸಿಕ್ ಲ್ಯಾಬ್ ನ ಅವಶ್ಯಕತೆಯಿದ್ದು, ಹುಬ್ಬಳ್ಳಿ ಮತ್ತು ಬಳ್ಳಾರಿ ಯಲ್ಲಿ ಈ ಪ್ರಯೋಗಾಲಯಗಳನ್ನು ಮಾಡಲಾಗಿದೆ. ರಾಜ್ಯದ ಪ್ರತಿಯೊಂದು ಪ್ರದೇಶದಲ್ಲಿ ಕನಿಷ್ಟ ಎರಡು ಫಾರೆನ್ಸಿಕ್ ಲ್ಯಾಬ್ ಸ್ಥಾಪಿಸಬೇಕು. ಶೀಘ್ರ ಅಪರಾಧ ಪತ್ತೆಗೆ ಈ ಕ್ರಮ ಆಗಲೇಬೇಕು ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದ್ದಾರೆ.
BIG NEWS: ಡಿ.13 ಕ್ಕೆ ʻದಕ್ಷಿಣ ಅಂಡಮಾನ್ʼ ಸಮುದ್ರದಲ್ಲಿ ಅಬ್ಬರಿಸಲಿದೆ ಮತ್ತೊಂದು ಚಂಡಮಾರುತ: IMDಯಿಂದ ಎಚ್ಚರಿಕೆ
ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ( Karnataka State Police Department ) ವತಿಯಿಂದ ಆಯೋಜಿಸಿರುವ ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭ – 2022ರಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರೊಂದಿಗೆ ಪಾಲ್ಗೊಂಡು ಸಮಾರಂಭವನ್ನುದ್ದೇಶಿಸಿ ಮಾತನಾಡಿ, ತಳ ಹಂತ ಪೊಲೀಸರು ಹಾಗೂ ಐಪಿಎಸ್ ಗಳ ತರಬೇತಿ ಚೆನ್ನಾಗಿ ಆಗುತ್ತಿದೆ. ಆದರೆ ಮಧ್ಯಮ ಹಂತದಲ್ಲಿ ಪೊಲೀಸರ ತರಬೇತಿ ಇನ್ನೂ ಪರಿಣಾಮಕಾರಿಯಾಗಿ ಆಗಬೇಕಿದೆ. ಇದಕ್ಕೆ ಪ್ರತ್ಯೇಕ ತರಬೇತಿ ಸಂಸ್ಥೆ, ಪಠ್ಯ ಹಾಗೂ ವಿವಿಧ ಕೋರ್ಸುಗಳ ಮೂಲಕ ಅವರು ದಕ್ಷತೆಯಿಂದ ಕರ್ತವ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದರು.
ಪೊಲೀಸರು ಬಳಸುವ ತಂತ್ರಜ್ಞಾನ ಬಲಪಡಿಸುವ ವಿಶೇಷ ಕಾರ್ಯಕ್ರಮ
ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಜವಾಬ್ದಾರಿಯಾಗಿದೆ. ತಂತ್ರಜ್ಞಾನ ದ ಮೂಲಕ ಅಪರಾಧಗಳು ಹೆಚ್ಚಾಗುತ್ತಿವೆ. ಅದೇ ತಂತ್ರಜ್ಞಾನ ದಲ್ಲಿ ಸಾಕ್ಚಿಗಳನ್ನು ಬಿಟ್ಡು ಹೋಗಿರುತ್ತಾರೆ. ಗೃಹ ಇಲಾಖೆ ಪೊಲೀಸರು ಬಳಸುವ ತಂತ್ರಜ್ಞಾನ ವನ್ನು ಇನ್ನಷ್ಟು ಬಲಪಡಿಸುವ ಕಾರ್ಯಕ್ರಮವನ್ನು ಮಾಡಬೇಕು. ಅದಕ್ಕೆ ಬೇಕಾದ ಪರಿಣಿತರನ್ನು ಬಳಸಿಕೊಂಡು, ಬೇಕಾದ ಅನುದಾನ ಮುಂದಿನ ಬಜೆಟ್ ನಲ್ಲಿ ನೀಡಲಾಗುವುದು ಎಂದರು.