ನೈಜರ್ನ ದೋಸ್ಸೊ ಪ್ರದೇಶದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬನನ್ನು ಅಪಹರಿಸಲಾಗಿದೆ ಎಂದು ನೈಜರ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ನಿಯಾಮಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಹತ್ಯೆಗೀಡಾದವರ ಮೃತ ದೇಹಗಳನ್ನು ಸ್ವದೇಶಕ್ಕೆ ಕಳುಹಿಸಲು ಮತ್ತು ಅಪಹರಣಕ್ಕೊಳಗಾದ ಭಾರತೀಯನನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ.
ನೈಜರ್ ನಲ್ಲಿರುವ ಎಲ್ಲಾ ಭಾರತೀಯರು ಜಾಗರೂಕರಾಗಿರಬೇಕು ಎಂದು ಮಿಷನ್ ಎಚ್ಚರಿಸಿದೆ.
“ನೈಜರ್ನ ದೋಸ್ಸೊ ಪ್ರದೇಶದಲ್ಲಿ ಜುಲೈ 15 ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ, ಇಬ್ಬರು ಭಾರತೀಯ ಪ್ರಜೆಗಳು ದುರಂತವಾಗಿ ಪ್ರಾಣ ಕಳೆದುಕೊಂಡರು ಮತ್ತು ಒಬ್ಬನನ್ನು ಅಪಹರಿಸಲಾಯಿತು. ದುಃಖಿತ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪಗಳು. ಮೃತ ದೇಹಗಳನ್ನು ಸ್ವದೇಶಕ್ಕೆ ಕಳುಹಿಸಲು ಮತ್ತು ಅಪಹರಣಕ್ಕೊಳಗಾದ ಭಾರತೀಯನ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ನಿಯಾಮಿಯಲ್ಲಿನ ಮಿಷನ್ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ನೈಜರ್ನಲ್ಲಿರುವ ಎಲ್ಲಾ ಭಾರತೀಯರು ಜಾಗರೂಕರಾಗಿರಲು ಸೂಚಿಸಲಾಗಿದೆ.
ರಾಜಧಾನಿ ನಿಯಾಮಿಯಿಂದ ಸುಮಾರು 100 ಕಿಲೋಮೀಟರ್ (63 ಮೈಲಿ) ದೂರದಲ್ಲಿರುವ ದೋಸ್ಸೊ ಪ್ರದೇಶದಲ್ಲಿ ವಿದ್ಯುತ್ ಮಾರ್ಗದ ನಿರ್ಮಾಣ ಸ್ಥಳದಲ್ಲಿ ಭದ್ರತೆ ಒದಗಿಸುತ್ತಿದ್ದ ನೈಜೀರಿಯನ್ ಸೇನಾ ಘಟಕದ ಮೇಲೆ ಅಪರಿಚಿತ ಸಶಸ್ತ್ರ ದಾಳಿಕೋರರು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯ ಮೂಲಗಳನ್ನು ಉಲ್ಲೇಖಿಸಿ ಅರಬ್ ನ್ಯೂಸ್ ವರದಿ ಮಾಡಿದೆ.
ಇದಕ್ಕೂ ಮುನ್ನ ಮಾರ್ಚ್ನಲ್ಲಿ ನೈಜರ್ನಲ್ಲಿ ಕೊಕೊರೌವಿನ ಗ್ರೇಟ್ ಸಹಾರಾದಲ್ಲಿ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ದಾಳಿ ನಡೆಸಿತ್ತು