ಆಂಧ್ರಪ್ರದೇಶ: ರಾಜ್ಯದಲ್ಲಿ ಬ್ಯಾಂಕ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತಂತ ಕುಟುಂಬವೊಂದು, ತಮ್ಮ ಅಂಗಡಿ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಈ ಭೀಕರ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶದ ಚಿಲುಕುರಿ ಬಟ್ಟೆ ಅಂಗಡಿ ಮುಂದೆಯೇ ಬ್ಯಾಂಕ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ.
ಬೆಂಕಿ ಹಚ್ಚಿಕೊಂಡಂತ ಕುಟುಂಬದ ಸದಸ್ಯರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ದುರ್ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನೂ ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ಪರಿಶೀಲನೆ ನಡೆಸಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬ್ಯಾಂಕ್ ಸಿಬ್ಬಂದಿಯ ಕಿರುಕುಳದಿಂದ ಆತ್ಮಹತ್ಯೆಯೋ ಅಥವಾ ಬೇರೆ ಕಾರಣಕ್ಕೋ ಎನ್ನುವ ಬಗ್ಗೆ ತನಿಖೆಯ ನಂತ್ರ ಖಚಿತ ಮಾಹಿತಿ ತಿಳಿದು ಬರಬೇಕಿದೆ.
ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ ಸಚಿವ ಡಾ.ಜಿ ಪರಮೇಶ್ವರ್
BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!