ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಿನ್ನೆ ರಾತ್ರಿ ನಡೆದ ಗುಂಡಿನ ಚಕಮಕಿ ವೇಳೆ ಇಬ್ಬರು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭಿಸಿದ ನಂತರ ಬುಧವಾರ ರಾತ್ರಿ ಸೋಪೋರ್ ಪಟ್ಟಣದ ಬೊಮೈ ಪ್ರದೇಶದಲ್ಲಿ ಎನ್ಕೌಂಟರ್ ನಡೆಯಿತು. ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಓರ್ವ ನಾಗರೀಕನಿಗೂ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.
Killed JeM terrorists were categorised &identified as MohdRafi of Sopore & KaiserAshraf of Pulwama. Terrorist Rafi was earlier booked underPSA twice. Both were involved in several terror crime cases. As per input they were planning to attack civilians in Sopore area: ADGP Kashmir https://t.co/n0JY0CLlXt
— Kashmir Zone Police (@KashmirPolice) August 31, 2022
ಕೊಲ್ಲಲ್ಪಟ್ಟ ಜೆಎಂ ಭಯೋತ್ಪಾದಕರನ್ನು ಸೋಪೋರ್ನ ಮೊಹಮ್ಮದ್ ರಫಿ ಮತ್ತು ಪುಲ್ವಾಮಾದ ಕೈಸರ್ ಅಶ್ರಫ್ ಎಂದು ಗುರುತಿಸಲಾಗಿದೆ.