ಇಂದೋರ್: ಇಂದೋರ್ನ ರಾಣಿಪುರ ಪ್ರದೇಶದಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದಾಗಿ ಮೂರು ಅಂತಸ್ತಿನ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಂದೇ ಕುಟುಂಬದ ೧೪ ಸದಸ್ಯರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಶಿವಂ ವರ್ಮಾ ತಿಳಿಸಿದ್ದಾರೆ.
ಈ ಪೈಕಿ 12 ಮಂದಿ ಮಹಾರಾಜ ಯಶವಂತರಾವ್ ಸರ್ಕಾರಿ ಆಸ್ಪತ್ರೆಯಲ್ಲಿ (ಎಂವೈಎಚ್) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.