ಬೆಳಗಾವಿ: ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, 20 ಜನರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಕಪ್ಪಲುಗುದ್ದಿಯ ಸಮೀಪದಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಪಲ್ಟಿಯಾಗಿದೆ. ಬಬಲಾದಿ ಜಾತ್ರೆಗೆ ತೆರಳಿ ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
ಟ್ರ್ಟಾಕ್ಟರ್ ನಲ್ಲಿ ತೆರಳುತ್ತಿದ್ದಂತ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರೈಲರ್ ಪಲ್ಟಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಯಭಾಗ ತಾಲ್ಲೂಕಿನ ಮಂಟೂರ ಗ್ರಾಮದವರು ಎಂಬುದಾಗಿ ಹೇಳಲಾಗುತ್ತಿದೆ.
ಇದಲ್ಲದೇ ಈ ಅಪಘಾತದಲ್ಲಿ 20 ಜನರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹಾರೋಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟ್ರಂಪ್ ಜೊತೆ ಮಾತಿನ ಚಕಮಕಿ:’ಜೆಲೆನ್ಸ್ಕಿ’ಗೆ ಯುರೋಪಿಯನ್ ಮಿತ್ರರಾಷ್ಟ್ರಗಳು, ಕೆನಡಾ ಬೆಂಬಲ | Trump-Zelensky